ಧರ್ಮದ ಆಧಾರದ ಮೇಲೆ ವ್ಯಕ್ತಿಯನ್ನು ನಿಂದಿಸುವುದು ಹೀನ ಕೃತ್ಯ : ಕೊಹ್ಲಿ Virat kohli saaksha tv
ದುಬೈ : ಧರ್ಮದ ಆಧಾರದ ಮೇಲೆ ವ್ಯಕ್ತಿಯನ್ನು ನಿಂದಿಸುವುದು ಶೋಚನೀಯ ಸಂಗತಿ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಐಸಿಸಿ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರುವಲ್ಲಿ ವಿಫಲರಾದ ಭಾರತೀಯ ವೇಗಿ ಮೊಹಮ್ಮದ್ ಶಮಿ ವಿರುದ್ಧ ಕೆಲವು ಮಂದಿ ಸಾಮಾಜಿಕ ಜಾಲತಾಣದಲ್ಲಿ ಧರ್ಮವನ್ನು ಮಧ್ಯೆ ತಂದು ಕೆಟ್ಟದಾಗಿ ಟೀಕಿಸಿದ್ದರು.
ಈ ಕುರಿತಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಆಧಾರದ ಮೇಲೆ ವ್ಯಕ್ತಿಯನ್ನು ನಿಂದಿಸುವುದು ಶೋಚನೀಯ ಸಂಗತಿ. ಆ ರೀತಿಯ ಮನಸ್ಥಿತಿಯುಳ್ಳ ಜನರ ಬಗ್ಗೆ ಮಾತನಾಡಿ ನನ್ನ ಒಂದು ನಿಮಿಷವನ್ನು ವ್ಯರ್ಥ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಅಲ್ಲದೆ ಒಬ್ಬ ವ್ಯಕ್ತಿಯನ್ನು ಧರ್ಮದ ಆಧಾರದ ಮೇಲೆ ದಾಳಿ ಮಾಡುವುದು ಅತ್ಯಂತ ಹೀನಕೃತ್ಯ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರಿಗೂ ಅವರಿಗೆ ಅಭಿಪ್ರಾಯವನ್ನ ವ್ಯಕ್ತಪಡಿಸುವ ಹಕ್ಕಿದೆ. ಆದರೆ, ಯಾವುದೇ ಒಬ್ಬ ವ್ಯಕ್ತಿಯನ್ನ ಅವರ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದರ ಬಗ್ಗೆ ನಾನು ಆಲೋಚನೆ ಕೂಡ ಮಾಡುವುದಿಲ್ಲ ಎಂದು ಹೇಳುವ ಮೂಲಕ ಶಮಿ ಬೆನ್ನಿಗೆ ನಿಂತಿದ್ದಾರೆ.









