ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಯುತ್ತಿರುವ ಹಿನ್ನಲೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆಯಾಗಿದ್ದು, ಮತ್ತೆ ಯಾವಾಗ ಎಕ್ಸಾಂ ನಡೆಯಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಚಿಂತೆಗೀಡಾಗಿದ್ದಾರೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್‌ನಲ್ಲಿ ನಡೆಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಚಿಂತನೆ ನಡೆಸಿದ್ದಾರೆ.
“ಮೇ 17ರವರೆಗೂ ಕೇಂದ್ರ ಸರ್ಕಾರದಿಂದ ಲಾಕ್ ಡೌನ್ ಆದೇಶವಿದೆ. 17ನೇ ತಾರೀಖಿನ ಬಳಿಕ ಇಲಾಖಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೇ 18 ಅಥವಾ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತೆ. ಜೂನ್ ತಿಂಗಳ ಆರಂಭದಲ್ಲೇ ಪರೀಕ್ಷೆಯನ್ನು ಮುಗಿಸಿದ್ರೆ, ಮುಂದಿನ ಶೈಕ್ಷಣಿಕ ವರ್ಷ ಆರಂಭಿಸಲು ಸುಲಭವಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.








