ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಕೊರೋನಾ ಸೋಂಕಿತ ಸಂಖ್ಯೆ 536 ರ ರೋಗಿಯ ಪ್ರಾಥಮಿಕ ಸಂಪರ್ಕದಿಂದ 51 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಇವರು ಮಂಗಳೂರಿನ ಬೋಳೂರು ನಿವಾಸಿಯಾಗಿದ್ದಾರೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕಳೆದ 15 ದಿನಗಳ ಹಿಂದೆ ಬೋಳೂರಿನ 58 ವರ್ಷದ ಮಹಿಳೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಆ ಸಂದರ್ಭದಲ್ಲಿ ಫಸ್ಟ್ ನ್ಯೂರೋ ಅಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ರೋಗಿ-536 ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದಾದ ಬಳಿಕ ಮಹಿಳೆಯ 62 ವರ್ಷದ ಪತಿಯಲ್ಲೂ ಸೋಂಕು ದೃಢಪಟ್ಟಿತ್ತು.
ಇದೀಗ ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಬೋಳಾರಿನ ನಿವಾಸಿ, 51 ವರ್ಷದ ವ್ಯಕ್ತಿಗೂ ಸೋಂಕು ಬಾಧಿಸಿದ್ದು, ಒಂದೇ ಪ್ರದೇಶದ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, ಇದೀಗ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








