ಚಿಕ್ಕಮಗಳೂರು’: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಜನ್ಮದಿನ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. Chikamagalur saaksha tv
ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಕ್ಕೆ ಕೈ ಜೋಡಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಶಾಂತಿ, ಸುವ್ಯವಸ್ಥೆ, ಏಕತೆಯ ಕುರಿತು ಪ್ರತಿಜ್ಞೆ ಸ್ವೀಕರಿಸಿದರು.
ನಗರದ ಹನುಮಂತಪ್ಪ ವೃತ್ತದಿಂದ ಜಿಲ್ಲಾ ಆಟದ ಮೈದಾನದ ವರೆಗೆ ಪಥ ಸಂಚಲನ ನಡೆಸಿದ ಪೊಲೀಸರು ಏಕತೆ, ಭ್ರಾತೃತ್ವ, ಶಾಂತಿ ಸುವ್ಯವಸ್ಥೆ ಬಗ್ಗೆ ಜನ ಜಾಗೃತಿ ಮೂಡಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ರಮೇಶ್, ಒಗ್ಗಟ್ಟಿನಲ್ಲಿ ಬಲವಿದೆ ಎಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತೊರಿಸಿಕೊಟ್ಟಿದ್ದಾರೆ. ಸರ್ದಾರ್ ಪಟೇಲ್ ಅವರ ಜನ್ಮದಿನದ ಮೂಲಕ ಅದನ್ನು ನೆನಪಿಸಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್, ಏಕತಾ ದಿವಸ್ ಕಾರ್ಯಕ್ರಮಕ್ಕೆ ಹಲವು ಇಲಾಖೆಗಳು ಕೈ ಜೋಡಿಸಿದ್ದು, ಏಕತೆಯ ಸಂದೇಶ ನೀಡಲಾಗುತ್ತಿದೆ ಎಂದರು.


![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-120x86.png)

![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
