ಕಡಬ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ವರುಣ ಆರ್ಭಟಿಸಿದ್ದಾನೆ. ಪರಿಣಾಮ ಜಿಲ್ಲೆಯ ಕಡಬ, ಬಿಳಿನೆಲೆ, ನೆಲ್ಯಾಡಿ, ಇಚಿಲಂಪಾಡಿ, ಆಲಂಕಾರು ಸೇರಿದಂತೆ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಹಾನಿ ಉಂಟಾಗಿದೆ.

ಗಾಳಿ ಸಹಿತ ಭಾರಿ ವರ್ಷಧಾರೆಯಿಂದಾಗಿ ಪುತ್ತೂರಿನ ಬೆದ್ರಾಳ ಗ್ರಾಮದಲ್ಲಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ವಾಹನ ಜಖಂಗೊಂಡಿದೆ. ಅಲ್ಲದೆ ರಸ್ತೆ ಪಕ್ಕದಲ್ಲಿದ ವಿದ್ಯುತ್ ಕಂಬವೂ ಧರೆಗುರುಳಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇನ್ನು ಸುಬ್ರಹ್ಮಣ್ಯದಲ್ಲೂ ಮಳೆರಾಯ ಆರ್ಭಟಿಸಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಸದ್ಯ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ತುಂತುರು ಮಳೆ ಮುಂದುವರಿದಿದೆ.








