ನವೆಂಬರ್ 9ಕ್ಕೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ bjp
ಬೆಂಗಳೂರು : ಇದೇ ತಿಂಗಳ ಒಂಭತ್ತ ರಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಅಂಗವಾಗಿ ರಾಜ್ಯ ಪ್ರವಾಸದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.
ನಾಲ್ಕು ತಂಡಗಳಿಂದ ರಾಜ್ಯ ಪ್ರವಾಸ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.
ರಾಜ್ಯ ಪ್ರವಾಸ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಪ್ರವಾಸದ ವೇಳೆ ಸಂಘಟನಾತ್ಮಕವಾಗಿ ಬಿಜೆಪಿಯನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆ ಸಮಾಲೋಚನೆ ನಡೆಯಲಿದೆ.
ಉಳಿದಂತೆ ಪಕ್ಷ ಸಂಘಟನೆ, ಉಪಸಮರದ ಫಲಿತಾಂಶದ ಬಗ್ಗೆ ಚರ್ಚೆ ಆಗಲಿದೆ ಎಂದು ತಿಳಿದುಬಂದಿದೆ.
ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.









