ಆಸ್ಪತ್ರೆಯಲ್ಲಿ ಅಗ್ನಿ ಅವಘಡ 10 ರೋಗಿಗಳು ಸಜೀವ ದಹನ
ಮಹಾರಾಷ್ಟ್ರದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಹ್ಮದ್‌ನಗರ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅಪಘಾತದಲ್ಲಿ 10 ರೋಗಿಗಳು ಸಜೀವ ದಹನವಾಗಿದ್ದಾರೆ. ಇನ್ನೂ 7 ಮಂದಿ ಗಾಯಗೊಂಡಿದ್ದಾರೆ. ಅವರ ಸ್ಥಿತಿಯೂ ವಿಷಮ ಪರಿಸ್ಥಿತಿಯಲ್ಲಿದೆ. ಕರೋನಾ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು ಅಪಘಾತ ಸಂಭವಿಸಿದೆ. ಅಪಘಾತದ ವೇಳೆ 17 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಸ್ಪತ್ರೆಗೆ ಧಾವಿಸಿ ಪರಿಹಾರ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ವಾಹನಗಳಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆದರೆ, ಅಪಘಾತದ ಸಂಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ಸಾಕು ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಕರೋನಾ ವೈರಸ್ ರೂಪಾಂತರೀ ಪ್ರಭೇಧ








