ಮೋದಿ ಜೀ ಅವರ ಅಭಿವೃದ್ಧಿ ವಾಹನವು ಹಿಮ್ಮುಖವಾಗಿ ಚಲಿಸುತ್ತಿದೆ : ರಾಹುಲ್ ಗಾಂಧಿ
LPG ಬೆಲೆ ಏರಿಕೆ ಪರ್ವ ಮುಂದುವರೆದ ಬೆನ್ನಲ್ಲೇ ಈ ಬಗ್ಗೆ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ವಾಹನವು ಹಿಮ್ಮುಖವಾಗಿ ಚಲಿಸುತ್ತಿದೆ ಎಂದು ವ್ಯಂಗ್ಯವಾಡಿರುವ ರಾಹುಲ್ ಗಾಂಧಿ ಮೋದಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಮಾತುಗಳಿಂದ ತುಂಬಾ ದೂರ ಉಳಿದಿದ್ದು, ಲಕ್ಷಾಂತರ ಕುಟುಂಬಗಳು ಒತ್ತಾಯಪೂರ್ವಕವಾಗಿ ಸೌದೆ ಒಲೆಗಳನ್ನು ಹಚ್ಚುವಂತೆ ಮಾಡಿದೆ ಎಂದಿದ್ದಾರೆ. ಮೋದಿ ಜೀ ಅವರ ಅಭಿವೃದ್ಧಿ ವಾಹನವು ಹಿಮ್ಮುಖವಾಗಿ ಚಲಿಸುತ್ತಿದೆ ಮತ್ತು ಬ್ರೇಕ್ ಸಹ ತುಂಡಾಗಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಚಂದ್ರನ ಮೇಲೆ ನೀರು ಪತ್ತೆ ಹಚ್ಚಲು ರೋವನ್ ರವಾನೆಯ ಯೋಜನೆ – ಆಸ್ಟ್ರೇಲಿಯಾ
ಬೆಲೆ ಏರಿಕೆಯ ಪರಿಣಾಮವಾಗಿ ಗ್ರಾಮೀಣ ಭಾಗದ 42%ರಷ್ಟು ಜನರು ಎಲ್‌ಪಿಜಿ ಸಿಲಿಂಡರ್ ಖರೀದಿಸಲಾರದೆ ಅದನ್ನು ಬಳಸುವುದನ್ನೇ ನಿಲ್ಲಿಸಿದ್ದಾರೆ. ಹಾಗೆಯೇ ಅಡುಗೆ ಮಾಡಲು ಸೌದೆ ಒಲೆ ಬಳಸಲಾರಂಭಿಸಿದ್ದಾರೆ ಎಂಬ ಸಮೀಕ್ಷೆಯೊಂದರ ಮಾಹಿತಿ ಆಧರಿಸಿ ಪ್ರಕಟವಾಗಿರುವ ವರದಿಯೊಂದರ ಚಿತ್ರವನ್ನೂ ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪೆಟ್ರೋಲಿಯಂ ಕಂಪೆನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಬೆಲೆಯನ್ನು ಅಕ್ಟೋಬರ್ 6ರಂದು 15 ರೂ ಹೆಚ್ಚಿಸಿದ್ದವು. ಅದೇ ರೀತಿ ನವೆಂಬರ್ 1ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 266 ರೂ ಏರಿಕೆ ಮಾಡಲಾಗಿತ್ತು.








