ಮಂಗಳೂರು: ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಹಿಂದಿರುಗಿದ ಹಾಜಬ್ಬಗೆ ಜಿಲ್ಲಾಡಳಿತ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. Hajabba
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಜಬ್ಬ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಮ್ಮ ಊರು ಹರೇಕಳದಲ್ಲಿ ಪಿಯುಸಿ ಕಾಲೇಜು ಆರಂಭವಾಗಬೇಕೆಂದು ವಿನಂತಿಸಿಕೊಂಡಿದ್ದೇನೆ.
ಪಿಯುಸಿ ಕಾಲೇಜು ಆರಂಭವಾಗುವುದು ತಮ್ಮ ಕನಸಾಗಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಮಾತನಾಡಿದ ಕ್ಷಣ ತಮ್ಮ ಜೀವನದಲ್ಲಿ ಮರೆಯಲಾಗದ ಘಟನೆ ಎಂದು ಹೇಳಿದರು.









