ಕಿತ್ತೂರು ಕರ್ನಾಟಕವನ್ನು ಸಮಗ್ರ ಸರ್ಕಾರ ಬದ್ಧ : ಬೊಮ್ಮಾಯಿ Basavaraja bommai saaksha tv
ಗದಗ : ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
ಪ್ರತಿಯೊಬ್ಬರ ಜೀವನ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗ ಜಿಲ್ಲೆಯ ಹಾಲಕೆರೆ ಗಂಜಿಗಾಲದ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಗುರುವಂದನೆ ಹಾಗೂ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಭಾರತದ ತಲಾ ಆದಾಯದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಶೇಕಡ 35ರಷ್ಟು ಜನ ಮಾತ್ರ ದುಡಿಮೆಯ ಮೂಲಕ ತಲಾ ಆದಾಯಕ್ಕೆ ಕೊಡುಗೆ ನೀಡುತ್ತಿದ್ದಾರೆ.
ಮಹಿಳೆಯರು ತಮ್ಮ ಮನೆಯ ಕೆಲಸದ ಜೊತೆಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಶೇಕಡ 65 ರಷ್ಟು ಜನ ತಲಾ ಆದಾಯದ ವ್ಯಾಪ್ತಿಗೆ ಒಳಪಡುತ್ತಾರೆ.
ಆಗ ನಮ್ಮ ರಾಜ್ಯ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಲಿದೆ.
ಆರ್ಥಿಕ ಸಂಕಷ್ಟ ಎದುರಾದರೂ ಮಹಿಳೆಯರನ್ನು ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪೂರಕವಾದ ಯೋಜನೆಗಳನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.









