ಹುಲಿ ಹಲ್ಲು ಮಾರಾಟ ಯತ್ನ ನಾಲ್ವರು ಆರೋಪಿಗಳು ವಶಕ್ಕೆ
ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪ್ರಾದೇಶಿಕ ವಲಯ ಅರಣ್ಯ ಘಟಕ ಯಶಸ್ವಿಯಾಗಿದೆ.
ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕ ಕಾರ್ಯಾಚರಣೆ ನಡೆಸಿ ಗೋಣಿಕೊಪ್ಪದ ಬಸ್ ತಂಗುದಾಣದ ಬಳಿ ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದೆ.

ಪೊನ್ನಂ ಪೇಟೆ ತಾಲೋಕಿನ ಸುಳುಗೋಡು ಗ್ರಾಮದ ಗಣೇಶ್ ವೈ. ಸಿ. ಕೋತುರು ಗ್ರಾಮದ ಸಂತೋಷ್ ಕೆ. ವಿ. ಸುಳುಗೋಡು ಗ್ರಾಮದ ಸಂತೋಷ್ ಕುಮಾರ್ ಹಾಗೂ ಚಿಕ್ಕ ಮಂಡೂರು ಗ್ರಾಮದ ಪೆಮ್ಮಂಡ್ ಪವನ್ ಬಂಧಿತ ಆರೋಪಿಗಳು. ಬಂಧಿತರಿಂದ ಆರು ಹುಲಿ ಹಲ್ಲುಗಳು ಮತ್ತು ಕೃತ್ಯಕ್ಕೆ ಬಳಸಿದ ದ್ವಿ ಚಕ್ರಗಳನ್ನ ವಶಕ್ಕೆ ಪಡೆಯಲಾಗಿದೆ.









