#JusticeForSanjuSamson | ಟ್ವಿಟ್ಟರ್ ನಲ್ಲಿ ಅಭಿಮಾನಿಗಳ ಅಭಿಯಾನ
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ವಿಚಾರವಾಗಿ ಆಯ್ಕೆದಾರರು ಮತ್ತೊಮ್ಮೆ ಮೊಂಡುತನ ತೋರಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಅವರನ್ನು ಕಡೆಗಣಿಸಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಕ್ರಿಕೆಟ್ ಅಭಿಮಾನಿಗಳು ತಮಗೆ ತೋಚಿದ ಹಾಗೆ ಮಾತನಾಡಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಫಿಟ್ನೆಸ್ ಕಾರಣದಿಂದಲೇ ಸಂಜು ಸ್ಯಾಮ್ಸನ್ ಅವರನ್ನ ತಂಡದಿಂದ ಹೊರಗುಳಿಸಲಾಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಈ ಸುದ್ದಿಗೆ ಇದೀಗ ಸಂಜು ಸ್ಯಾಮ್ಸನ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅವರು ವಿವಿಧ ಸಂದರ್ಭಗಳಲ್ಲಿ ಬೌಂಡರಿಯಲ್ಲಿ ಅದ್ಭುತ ಕ್ಯಾಚ್‍ಗಳನ್ನು ಸ್ವೀಕರಿಸುವ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಅಂದಹಾಗೆ ಮಂಗಳವಾರ ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಟೆಸ್ಟ್ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಐಪಿಎಲ್‍ನಲ್ಲಿ ಮಿಂಚಿದ್ದ ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್ ಮತ್ತು ಅವೇಶ್ ಖಾನ್ ಅವರು ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆದ್ರೆ ಸಂಜು ಸ್ಯಾಮ್ಸನ್ ಅವರಿಗೆ ಮಾತ್ರ ಸ್ಥಾನ ಸಿಕ್ಕಿಲ್ಲ. ಸಂಜು ಈ ಋತುವಿನಲ್ಲಿ 14 ಇನ್ನಿಂಗ್ಸ್‍ಗಳಲ್ಲಿ 484 ರನ್ ಗಳಿಸಿದ್ದಾರೆ.
ಆದರೆ, ಸಂಜುಗೆ ಸ್ಥಾನ ಸಿಗದ ಕಾರಣ ಅವರಿಗೆ ನ್ಯಾಯ ಸಿಗಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
“ಇಂತಹ ಉತ್ತಮ ಆಟಗಾರನನ್ನು ಏಕೆ ಆಯ್ಕೆ ಮಾಡುತ್ತಿಲ್ಲ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು #JusticeForSanjuSamson ಹ್ಯಾಷ್ ಟ್ಯಾಗ್ ಬಳಸುತ್ತಿದ್ದಾರೆ.









