ಚೆನೈ ಮಹಾಮಳೆ – ನಿರಾಶ್ರಿತನನ್ನ ಹೆಗಲ ಮೇಲೆ ಹೊತ್ತು ಸಾಗಿಸಿದ ಮಹಿಳಾ ಪೊಲೀಸ್
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಚೆನೈ ಅಕ್ಷರ ಸಹ ನಲುಗಿ ಹೋಗಿದೆ. ಚೆನೈನ ಹಲವು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು ಪ್ರವಾಹ ಸೃಷ್ಠಿಯಾಗಿದೆ.
ಚೆನೈನ ಮಳೆಯಲ್ಲಿ ನಿರಾಶ್ರಿತನೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆತನನ್ನ ಮಹಿಳಾ ಪೋಲೀಸ್ ಇನ್ಸ್ ಪೆಕ್ಟರ್ ಒಬ್ಬರು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ರಕ್ಷಿಸಿದ ವೀಡಿಯೋ ಈಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಇನ್ಸಪೆಕ್ಟರ್ ನ ರಾಜೇಶ್ವರಿ ಎಂದು ಗುರುತಿಸಲಾಗಿದೆ.
ಚೆನ್ನೈ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಈಗಾಗಲೇ 12 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://twitter.com/i/status/1458722849867198466








