ದ.ಕ ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣ ಏರಿಕೆ ಕಾಣುತ್ತಿದ್ದು, ಇಂದು 11 ವರ್ಷದ ಹುಡುಗಿ, 16 ವರ್ಷದ ಯುವತಿ ಹಾಗೂ 38ರ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು 28 ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದ್ದು, 12 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 3 ಮಂದಿ ಸಾವನ್ನಪ್ಪಿದ್ದಾರೆ.
ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ ಕೊರೊನಾ ರೋಗಿ ಸಂಖ್ಯೆ 536 ಮಹಿಳೆಯಿಂದ ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಹುಡುಗಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ಬಂಟ್ವಾಳದ ಕೊರೊನಾ ಸೋಂಕಿತ ರೋಗಿ ಸಂಖ್ಯೆ 360 ರ ಸಂಪರ್ಕದಲ್ಲಿದ್ದ ಮೃತ ಮಹಿಳೆಯ 16 ವರ್ಷದ ಮಗಳಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಬಾಲಕಿಯನ್ನು ಎನ್ ಐ ಟಿ ಕೆ ಯಲ್ಲಿ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.








