ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಯುವಕ
17 ವರ್ಷದ ಬಾಲಕಿಯ ಮೇಲೆ 28 ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಆರೋಪಿಯನ್ನು ಬಂಧಿಸಲಾಗಿದ್ದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಲ್ಗಾಂವ್ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ.
ಯುವತಿ ಮತ್ತು ಆರೋಪಿ ಒಂದೇ ಗ್ರಾಮದವರಾಗಿದ್ದರಿಂದ ಪರಸ್ಪರ ಪರಿಚಿತರಾಗಿದ್ದರು. ನವೆಂಬರ್ 9 ರಂದು ಬಾಲಕಿಯ ಮನೆಯೊಳಗೆ ಒಬ್ಬಂಟಿಯಾಗಿದ್ದಾಗ ನುಗ್ಗಿದ ಆರೋಪಿ ಒಳಗಿನಿಂದ ಚಿಲಕ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಯುವತಿ ಜೋರಾಗಿ ಕೂಗಿ ಜನರನ್ನ ಕರೆಯಲು ಮುಂದಾದಾಗ ಕಪಾಳಕ್ಕೆ ಹೊಡೆದು ಹೆದರಿಸಿದ್ದಾನೆ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಭಯ ಪಡಿಸಿದ್ದಾನೆ.
ಕೆಲಸ ಮುಗಿಸಿ ಸಂಜೆ ಮನೆಗೆ ಹಿಂದಿರುಗಿದಾಗ ಬಾಲಕಿ ತನ್ನ ತಾಯಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ಆಕೆಯ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಪೊಲೀಸರು ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ