ಪರಿಷತ್ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ಬೆಂಬಲಿಸಬೇಕು : ವಾಟಾಳ್ ನಾಗರಾಜ್ Vatal Nagaraj
ಚಾಮರಾಜನಗರ : ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ಬೆಂಬಲಿಸಬೇಕು.
ಈ ಬಗ್ಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಪರಿಷತ್ ಚುನಾವಣೆ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ವಿಧಾನಪರಿಷತ್ ಗೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಯಲಿದ್ದು, ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಈ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್ ಬೆಂಬಲ ನೀಡಬೇಕು, ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದೇನೆ.
ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.









