ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಆಸೀಸ್ ಪ್ರಧಾನಿ ಖಂಡನೆ
ಭಾರತ ಸರ್ಕಾರವು ಉಡುಗೊರೆಯಾಗಿ ನೀಡಿದ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಆಸ್ಟ್ರೇಲಿಯಾದಲ್ಲಿ ಧ್ವಂಸಗೊಳಿಸಲಾಗಿದೆ., ಇದು ಭಾರತೀಯ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಆಘಾತ ಮತ್ತು ನಿರಾಶೆಯನ್ನು ಉಂಟುಮಾಡಿದೆ ಇದು ಅವಮಾನಕರ ಘಟನೆ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಬಲವಾಗಿ ಖಂಡಿಸಿದ್ದಾರೆ.
ವಿಶ್ವದಲ್ಲೇ ಅತ್ಯಂತ ಯಶಸ್ವಿ ಬಹುಸಂಸ್ಕೃತಿ ಮತ್ತು ವಲಸೆ ರಾಷ್ಟ್ರವಾಗಿರುವ ದೇಶದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಸಹಿಸಲಾಗುವುದಿಲ್ಲ. ಇದಕ್ಕೆ ಕಾರಣರಾದವರು ಆಸ್ಟ್ರೇಲಿಯನ್ ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ. ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತದ 75ನೇ ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಪ್ರಯುಕ್ತ ಶುಕ್ರವಾರ ವಿಕ್ಟೋರಿಯಾದ ರೋವಿಲ್ನಲ್ಲಿ ಆಸ್ಟ್ರೇಲಿಯಾದ ಭಾರತೀಯ ಸಮುದಾಯ ಕೇಂದ್ರದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಇದಾದ ಕೆಲವೇ ಗಂಟೆಗಳ ಬಳಿಕ ಈ ಘಟನೆ ಸಂಭವಿಸಿದೆ.
ಶುಕ್ರವಾರ ಸಂಜೆ 5.30 ರಿಂದ ಶನಿವಾರ ಸಂಜೆ 5.30 ರ ನಡುವೆ ಅಪರಿಚಿತ ಅಪರಾಧಿಗಳು ಪ್ರತಿಮೆಯ ಶಿರಚ್ಛೇದ ಮಾಡಲು ವಿದ್ಯುತ್ ಉಪಕರಣವನ್ನು ಬಳಸಿದ್ದಾರೆ ಎಂದು ವಿಕ್ಟೋರಿಯಾ ಪೊಲೀಸರು ತಿಳಿಸಿದ್ದಾರೆ.
ನಾಕ್ಸ್ ಅಪರಾಧ ತನಿಖಾ ಘಟಕದ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಅಪರಾಧ ಬಗ್ಗೆ ಸಾಕ್ಷಿ ಅಥವಾ ಮಾಹಿತಿಗಳಿದ್ದರೆ ಮುಂದೆ ಬರುವಂತೆ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದಾರೆ.








