“ಹೌದು ಹುಲಿಯಾ” ಎಂದು ಬೊಬ್ಬೆ ಹಾಕುವುದಕ್ಕೆ ತಂಡ ರೆಡಿ ಮಾಡಿ : ಸಿದ್ದುಗೆ ಬಿಜೆಪಿ ಟಾಂಗ್
ಬೆಂಗಳೂರು : “ಹೌದು ಹುಲಿಯಾ” ಎಂದು ಬೊಬ್ಬೆ ಹಾಕುವುದಕ್ಕೆ ತಂಡ ರೆಡಿ ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಾಂಗ್ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ “ಡಿಕೆ ಡಿಕೆ” ಎಂಬ ಘೋಷಣೆ ಸದ್ದು ಮಾಡುತ್ತಿದೆ.
“ಹೌದು ಹುಲಿಯಾ” ಎಂದು ಬೊಬ್ಬೆ ಹಾಕುವುದಕ್ಕೆ ನೀವೂ ಒಂದು ತಂಡ ತಯಾರು ಮಾಡಿ ಎಂದು ಕುಟುಕಿದೆ.
ಸಿದ್ದರಾಮಯ್ಯನವರೇ, ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ. ಟಿಪ್ಪು ಜಯಂತಿ ನಡೆಸಿದಿರಿ. ಶಾದಿ ಭಾಗ್ಯ ಕೊಟ್ಟಿರಿ
ಆದರೆ ಫಲವೇನು? ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ.
ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ.
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ.
ಇದಕ್ಕೆ ಕಾರಣ “ಡಿಕೆ ಡಿಕೆ” ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ.
ಒಡೆದ ಮನೆಯಾಗಿರುವ ಕಾಂಗ್ರೆಸ್‍ನಲ್ಲಿ ಇದು ಸಾಮಾನ್ಯವಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ.









