ನೆಲಮಂಗಲದಲ್ಲಿ ಮಂಗಳಮುಖಿ ಆತ್ಮಹತ್ಯೆ suicide saaksha tv
ನೆಲಮಂಗಲ : ಹಮಾಮ್ ನಡೆಸಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ಜಕ್ಕಸಂದ್ರ ಗ್ರಾಮದ ನಿವಾಸಿ ಮಾಯಾ(33) ಆತ್ಮಹತ್ಯೆ ಮಾಡಿಕೊಂಡಿರುವ ಮಂಗಳಮುಖಿ.
ಮೂಲತಃ ಹೊಳೆನರಸೀಪುರದವರು ಎನ್ನಲಾದ ಮಾಯಾ ಕಳೆದ ಮೂರು ವರ್ಷಗಳಿಂದ ಜಕ್ಕಸಂದ್ರ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು.
ಇಂದು ಬೆಳಿಗ್ಗೆ ಬಾಗಿಲು ತೆಗೆಯದ ಕಾರಣ ಪಕ್ಕದ ಮನೆಯ ನಿವಾಸಿ, ಮನೆಯ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ.
ಬಳಿಕ ಮನೆಯ ಕಿಟಕಿಯಲ್ಲಿ ನೋಡಿದಾಗ ಮಾಯಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ನೆಲಮಂಗಲದ ಟೌನ್ ಪೊಲೀಸ್ರು ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.









