ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಡಿಜಿಟಲ್ ಬ್ರಾಂಡ್‌ ಗಳಲ್ಲಿ ಪ್ರಮುಖ ಸ್ಥಾನ ಪಡೆದ “ಕೂ”

Namratha Rao by Namratha Rao
November 18, 2021
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಡಿಜಿಟಲ್ ಬ್ರಾಂಡ್‌ ಗಳಲ್ಲಿ ಪ್ರಮುಖ ಸ್ಥಾನ ಪಡೆದ “ಕೂ”

US, EMEA ಮತ್ತು APAC, ರಾಷ್ಟ್ರಗಳಲ್ಲಿಆಂಪ್ಲಿಟ್ಯೂಡ್‌ನ ಮೊದಲ ಆವೃತ್ತಿಯಲ್ಲಿ ಉಲ್ಲೇಖಿಸಲ್ಪಟ್ಟ ಭವಿಷ್ಯದ ಜನಪ್ರಿಯ ಡಿಜಿಟಲ್ ಉತ್ಪನ್ನಗಳ ಪಟ್ಟಿಯ ಏಕೈಕ ಸಾಮಾಜಿಕ ಮಾಧ್ಯಮ ವಾಗಿದೆ

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ರಾಷ್ಟ್ರೀಯ: Koo(ಕೂ) ಅಪ್ಲಿಕೇಶನ್ – ಭಾರತದ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ವೇದಿಕೆ – ಆಂಪ್ಲಿಟ್ಯೂಡ್ ರಚಿಸಿದಂತಹ ಉತ್ಪನ್ನ ವರದಿ 2021 ರ ಅನ್ವಯ ಏಷ್ಯಾ ಪೆಸಿಫಿಕ್ (APAC) ಪ್ರದೇಶದ ಭವಿಷ್ಯದ ಜನಪ್ರಿಯ 5 ಉತ್ಪನ್ನಗಳಲ್ಲಿ ಸ್ಥಾನ ಪಡೆದಿದೆ. ಬಳಕೆದಾರರು ತಮ್ಮ ಮಾತೃಭಾಷೆಯಲ್ಲಿ ಮನದಾಳವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುವ ವಿಶಿಷ್ಟ ವೇದಿಕೆ Koo (ಕೂ), ಇದು APAC, US ಮತ್ತು EMEA ಪ್ರದೇಶದಾದ್ಯಂತ ಆಂಪ್ಲಿಟ್ಯೂಡ್‌ನ ಮೊದಲ ಆವೃತ್ತಿಯ ಪ್ರತಿಷ್ಠಿತ ವರದಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮವಾಗಿದೆ. ಭಾರತದಿಂದ ಉಲ್ಲೇಖಿಸಲ್ಪಟ್ಟ ಕೇವಲ ಎರಡು ಬ್ರಾಂಡ್‌ಗಳಲ್ಲಿ ಕೂ ಕೂಡ ಒಂದಾಗಿದೆ (CoinDCX ಇನ್ನೊಂದು).

ಆಂಪ್ಲಿಟ್ಯೂಡ್‌ನ ಬಿಹೇವಿಯರಲ್ ಗ್ರಾಫ್‌ ಮಾಹಿತಿಯು ನಮ್ಮ ಡಿಜಿಟಲ್ ಜೀವನವನ್ನು ರೂಪಿಸುವ ಪ್ರಪಂಚದ ಅತ್ಯಂತ ಉದಯೋನ್ಮುಖ ಡಿಜಿಟಲ್ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ. ಈ ವರದಿಯು “ಸಾಮಾಜಿಕ ಮಾಧ್ಯಮ ವೇದಿಕೆಯ Koo(ಕೂ) ಆ್ಯಪ್ ತನ್ನ ಭಾರತೀಯ ಬಳಕೆದಾರರ ವಿಶಿಷ್ಟತೆಯನ್ನು ಗುರುತಿಸಿ ವಿವರಿಸಿದೆ. Koo(ಕೂ) “1 ಬಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಆಯ್ಕೆ ಮಾಡಿಕೊಂಡ ಆದ್ಯತೆಯ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ಕೂ ಪ್ರಬಲವಾಗಿ ಬೆಳೆದಿದೆ.

ಜನರು ತಮ್ಮದೇ ಸ್ಥಳೀಯ ಭಾಷೆಗಳಲ್ಲಿಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡುವ ಮೇಡ್-ಇನ್-ಇಂಡಿಯಾ ಪ್ಲಾಟ್‌ಫಾರ್ಮ್‌ ಕೂ (Koo), ಅಪ್ಲಿಕೇಶನ್ ಮಾರ್ಚ್ 2020 ರಲ್ಲಿ ಪ್ರಾರಂಭವಾಯಿತು. ನಂತರದ 20 ತಿಂಗಳ ಅಲ್ಪಾವಧಿಯಲ್ಲಿ 15 ಮಿಲಿಯನ್ ಬಳಕೆದಾರರನ್ನು ಗಳಿಸಿಕೊಂಡಿದ್ದಲ್ಲದೇಮತ್ತು 9 ಭಾರತೀಯ ಭಾಷೆಗಳಲ್ಲಿ ಸೇವೆಯನ್ನು ಒದಗಿಸುತ್ತಿದೆ. ಬಲಿಷ್ಠ ತಂತ್ರಜ್ಞಾನ, ಅನುವಾದದ ಅವಕಾಶ ಮುಂತಾದ ವಿಶಿಷ್ಟ ಆಪ್ಶನ್‌ಗಳನ್ನು ಬಳಕೆದಾರರಿಗೆ ಒದಗಿಸಿದ್ದು, ಮುಂದಿನ ಒಂದು ವರ್ಷದಲ್ಲಿ Koo (ಕೂ) 100 ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಟುವ ನಿರೀಕ್ಷೆಯಿದೆ.

2021 ರ ಉತ್ಪನ್ನ ವರದಿಗೆ ಪ್ರತಿಕ್ರಿಯಿಸಿದ Koo(ಕೂ) ಸಹ-ಸಂಸ್ಥಾಪಕ ಮತ್ತು ಸಿಇಒ, ಅಪ್ರಮೇಯ ರಾಧಾಕೃಷ್ಣ: “ಈ ಗೌರವಾನ್ವಿತ ಜಾಗತಿಕ ವರದಿಯಲ್ಲಿ Koo(ಕೂ) ಅಪ್ಲಿಕೇಶನ್ ಗುರುತಿಸಲ್ಪಟ್ಟು APAC ನ ಟಾಪ್ 5 ರ ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳಲ್ಲಿ Koo(ಕೂ) ಒಂದಾಗಿರುವುದು ಹೆಮ್ಮೆಯ ವಿಷಯ. ನಾವು ಭಾರತದಿಂದ ಮತ್ತು APAC, EMEA ಮತ್ತು US ನಾದ್ಯಂತ ಗುರುತಿಸಲ್ಪಟ್ಟ ಏಕೈಕ ಸಾಮಾಜಿಕ ಮಾಧ್ಯಮ ಆಗಿದ್ದೇವೆ. ಭಾರತದಿಂದ, ವಿಶ್ವಕ್ಕಾಗಿ ನಿರ್ಮಿಸಲಾಗುತ್ತಿರುವ ಬ್ರ್ಯಾಂಡ್‌ ಆದ ನಮಗೆ ಇದೊಂದು ಗಮನಾರ್ಹ ಸಾಧನೆಯಾಗಿದೆ. ಆಂಪ್ಲಿಟ್ಯೂಡ್‌ನ ಈ ವರದಿಯು ಡಿಜಿಟಲ್ ಜಗತ್ತಿನಲ್ಲಿ ಭಾಷಾ ಅಡೆತಡೆಗಳನ್ನು ಅಳಿಸಲು, ಸಂಸ್ಕೃತಿ ಮತ್ತು ಭಾಷಾ ವೈವಿಧ್ಯತೆಯ ನಡುವೆಯೂ ಜನರು ಪರಸ್ಪರ ಸಂಪರ್ಕಿಸಲು ಇನ್ನಷ್ಟು ಶ್ರಮಿಸುವಂತೆ ನಮ್ಮನ್ನು ಪ್ರೇರೇಪಿಸುತ್ತದೆ.

ಆಂಪ್ಲಿಟ್ಯೂಡ್ ಎಂಬುದು ಕ್ಯಾಲಿಫೋರ್ನಿಯಾ ಮೂಲದ ಉತ್ಪನ್ನ ವಿಶ್ಲೇಷಣೆ ಮತ್ತು ಡಿಜಿಟಲ್ ಆಪ್ಟಿಮೈಸೇಶನ್ ಸಂಸ್ಥೆಯಾಗಿದೆ. ಈ ವರದಿಯು ‘ಶೀಘ್ರವಾಗಿ ಬೆಳೆಯುತ್ತಿರುವ ಉತ್ಪನ್ನಗಳನ್ನು’ ಆಯ್ಕೆ ಮಾಡುತ್ತದೆ. ‘ಭವಿಷ್ಯದ ಜನಪ್ರಿಯ ಕಂಪನಿ’ಗಳನ್ನು ಗುರುತಿಸಲು ತಿಂಗಳ ಬಳಕೆದಾರರ ದತ್ತಾಂಶವನ್ನು ಇದು ವಿಶ್ಲೇಷಿಸುತ್ತದೆ.

ಅತ್ಯುತ್ತಮ ಡಿಜಿಟಲ್ ಅನುಭವವನ್ನು ಒದಗಿಸುವ ಕಂಪನಿಗಳ ತಿಂಗಳ ಬಳಕೆದಾರರ ಹೆಚ್ಚಳವನ್ನು ಪರಿಗಣಿಸಿ ಆಂಪ್ಲಿಟ್ಯೂಡ್ ವರದಿಗಳನ್ನು ನೀಡುತ್ತದೆ. ಜೂನ್ 2020 ರಿಂದ ಜೂನ್ 2021 ರವರೆಗಿನ ಒಟ್ಟು 13-ತಿಂಗಳ ಅವಧಿಯಲ್ಲಿ ಸಕ್ರಿಯ ಬಳಕೆದಾರರ ಒಟ್ಟು ಸಂಖ್ಯೆಯಲ್ಲಿ ಕ್ಷಿಪ್ರ ಬೆಳವಣಿಗೆಯನ್ನು ಗುರುತಿಸಿ Koo(ಕೂ) ಅಪ್ಲಿಕೇಶನ್ ಅನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೂ ಬಗ್ಗೆ: Koo(ಕೂ) ಮಾರ್ಚ್ 2020 ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ-ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು, ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ Koo(ಕೂ) ಒಂದು ವೇದಿಕೆಯನ್ನು ಒದಗಿಸುತ್ತದೆ.

ಆಂಪ್ಲಿಟ್ಯೂಡ್ ಬಗ್ಗೆ: ಡಿಜಿಟಲ್ ಆಪ್ಟಿಮೈಸೇಶನ್‌ನ ಪ್ರವರ್ತಕರಾದ ಆಂಪ್ಲಿಟ್ಯೂಡ್‌ನ ಪರಂಪರೆಯು, ಡಿಜಿಟಲ್ ಉತ್ಪನ್ನಗಳು, ಡೇಟಾ-ಚಾಲಿತ ಉತ್ಪನ್ನಗಳ ವಿಶ್ಲೇಷಣೆ, ಡಿಜಿಟಲ್ ಉತ್ಪನ್ನದ ಅಳವಡಿಕೆ, ಉತ್ಪನ್ನದಲ್ಲಿನ ನಡವಳಿಕೆ ಮತ್ತು ಡಿಜಿಟಲೀಕರಣಕ್ಕೆ ಆದ್ಯತೆ ನೀಡುವ ಜಗತ್ತಿನಲ್ಲಿನ ಚಾಲನಾ ತಂತ್ರಗಳ ಕುರಿತು ಅಪ್ರತಿಮ ಅಭಿಪ್ರಾಯಗಳನ್ನು ನೀಡುತ್ತದೆ.

“ಪುಷ್ಪ”ದಲ್ಲಿ ಅಲ್ಲು ಜೊತೆ ಹೆಜ್ಜೆ ಹಾಕಲು ಇಷ್ಟುಂದು ಸಂಭಾವನೆ ಕೇಳಿದ್ರಾ…..! ಸಮಂತಾ..!

Tags: #saakshatv
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram