ಬಡವರು ಬಡವರಾಗಿ ಉಳಿಯಲು ಕಾಂಗ್ರೆಸ್ ಕಾರಣ : ಕಟೀಲ್ nalin kumar kateel saaksha tv
ಕೊಪ್ಪಳ : ದೇಶದಲ್ಲಿ ಬಡವರು ಬಡವರಾಗಿ ಉಳಿಯಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಕೊಪ್ಪಳದಲ್ಲಿ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿದರು.
ಬಳಿಕ ಮತನಾಡಿದ ಕಟೀಲ್, ಕಾಂಗ್ರೆಸ್ ಪಕ್ಷ ತುರ್ತು ಪರಿಸ್ಥಿತಿ ಹೇರುವ ಮೂಲಕ ಚುನಾಯಿತ ಸರ್ಕಾರಗಳನ್ನು ಉರುಳಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಗುಡುಗಿದರು.
ಅಲ್ಲದೆ ಕಾಂಗ್ರೆಸ್ ತನ್ನ ಆಡಳಿತದುದ್ದಕ್ಕೂ ಸುಳ್ಳು, ವಂಚನೆ ಮತ್ತು ಮೋಸ ಮಾಡಿದೆ. ಅದು ಅವರ ರಕ್ತದಲ್ಲೇ ಇದೆ. ದೇಶದಲ್ಲಿ ಬಡವರು ಬಡವರಾಗಿ ಉಳಿಯಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದರು.
ಇನ್ನು ಈ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಶ್ರೀ ಭಗವಂತ ಖೂಬಾ, ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಶ್ರೀ ಹಾಲಪ್ಪ ಆಚಾರ್, ಶಾಸಕರಾದ ಶ್ರೀ ರಾಜೂಗೌಡ, ಶ್ರೀ ಎನ್. ಮಹೇಶ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮಾಲಿಕಯ್ಯ ಗುತ್ತೇದಾರ, ಸಂಸದರಾದ ಶ್ರೀ ಪ್ರತಾಪ್ ಸಿಂಹ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಎಸ್. ಕೇಶವ ಪ್ರಸಾದ್, ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾ ಅಧ್ಯಕ್ಷರಾದ ಶ್ರೀ ದೊಡ್ಡನಗೌಡ ಎಚ್. ಪಾಟೀಲ್, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.









