ಭಾರಿ ಮಳೆ ಹಿನ್ನಲೆ ಕೋಲಾರ – ಚಿಕ್ಕಬಳ್ಳಪುರ ಶಾಲೆಗಳಿಗೆ ರಜೆ
ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗ ಕರ್ನಾಟದಾದ್ಯಂತ ಭಾರಿ ಮಳೆಯಾಗುತ್ತಿದೆ. ಮಳೆ ಆರ್ಭಟ ಮುಂದುವರಿದಿದ್ದು ಮಳೆಯಿಂದ ತೀವ್ರ ಹಾನಿ ಅನುಭವಿಸಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೋಲಾರ ಜಿಲ್ಲೆಯ ಡಿಡಿಪಿಐ ರೇವಣಸಿದ್ದಪ್ಪ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಡಿಡಿಪಿಐ ಜಯರಾಮ ರೆಡ್ಡಿ ಯವರು ಮಾತನಾಡಿ 19 -20 ವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಸುತ್ತೋಲೆ ಹೊರಡಿಸಿ ಆದೇಶಿಸಿದ್ದಾರೆ..
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿಗಳಿಗೂ ರಜೆ ಘೋಷಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಹಿತಿ ನೀಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ನವೆಂಬರ್ 22ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ. ಇನ್ನೆರಡು ದಿನ ಹಗಲಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








