ಭಾರಿ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶ.
ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಮಹಾ ಮಳೆ ಕಾರಣದಿಂದ ಜಿಲ್ಲೆಯಲ್ಲಿ 83 ಸಾವಿರ ಹೆಕ್ಟರ್ ನಲ್ಲಿದ್ದ ರಾಗಿ ಜೋಳ ನೆಲಗಡಲೆ ಭತ್ತ ಹಾನಿಯಾಗಿದೆ. 2600 ಹೆಕ್ಟರ್ ಪ್ರದೇಶದಲ್ಲಿದ್ದ ತರಕಾರಿ ಹೂ ಹಣ್ಣು ಬೆಳೆಗಳು ಹಾಳಾಗಿದೆ ಚಿತ್ರದುರ್ಗ ದಾವಣಗೆರೆ ಸೇರಿದಂತೆ ಸಾವಿರಾರು ಎಕೆರೆ ಮೆಕ್ಕೆಜೋಳ ಭತ್ತ ಬೆಳೆ ನೆಲ ಕಚ್ಚಿದೆ.
ಕರಾವಳಿಯಲ್ಲಿ ಭತ್ತದ ಕೃಷಿ ಹಾನಿಗೀಡಾಗಿದೆ. ಧಾರವಾಡದಲ್ಲಿ ಹತ್ತಿ ಮೆಕ್ಕೆಜೋಳ ಸೇರಿದಂತೆ ಈರುಳ್ಳಿ ಬೆಳೆ ನಾಶವಾಗಿದೆ. ತುಮಕೂರು ಜಿಲ್ಲಾದ್ಯಂತ ಒಟ್ಟು 14 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ.
ಮಳೆಯಿಂದಾಗಿ ತರಕಾರಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯಗಳಿದ್ದು, ಭತ್ತ ಮೊದಲಾದ ಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಸುವ ಬಗ್ಗೆ ಚರ್ಚೆಗಳು ನಡೆದಿದೆ.
ಈ ನಡುವೆ ಮಳೆಯಿಂದಾದ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ರೈತರಿಗೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.








