ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ನ ತನಿಖಾ ಪ್ರಕ್ರಿಯೆ ಮುಗಿದು, ಆರೋಪ ಪಟ್ಟಿ ಸಿದ್ಧವಾಗಿದೆ. ಅದನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದು ರಾಜ್ಯ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ಅವರು ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ಸುಮಾರು 900 ಪುಟಗಳ ಆರೋಪಪಟ್ಟಿ ಸಿದ್ಧಪಡಿಸಿದ್ದಾರೆ. ರಾಜ್ಯ ಸರಕಾರದ ಅನುಮತಿ ಲಭಿಸಿದ ಕೂಡಲೇ ಈ ಪ್ರಕರಣದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಆದಿತ್ಯ ರಾವ್ ನ ಗುರುತು ಪತ್ತೆ ಪೆರೇಡ್ ಪೂರ್ತಿಗೊಳಿಸಲಾಗಿದ್ದು, ಇದೀಗ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಮಾತ್ರ ಬಾಕಿ ಇದೆ. ಬ್ರೈನ್ ಮ್ಯಾಪಿಂಗ್ ನಡೆಸುವ ಬಗ್ಗೆ ಆರೋಪಿಯ ಅನುಮತಿಯನ್ನು ಪಡೆಯಲಾಗಿದೆ. ಈಗಾಗಲೇ ಈ ಪ್ರಕ್ರಿಯೆ ಮುಗಿಸಬೇಕಾಗಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ಈ ಪ್ರಕ್ರಿಯೆ ವಿಳಂಬವಾಗಿದೆ.








