ಹುಬ್ಬಳ್ಳಿ ಜಿಲ್ಲೆಯಲ್ಲಿ ಮಳೆ ಅವಾಂತರ : ಬೆಳೆ ನಾಶ Rainfall saaksha tv
ಹುಬ್ಬಳ್ಳಿ/ಧಾರವಾಡ : ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಹತ್ತಿ, ಕಡಲೆ, ಮೆಣಸಿನಕಾಯಿ ಜೋಳ ಸೇರಿದಂತೆ ನೂರಾರು ಎಕರೆಯಲ್ಲಿ ಬೆಳೆ ಹಾನಿಗೊಳಲಾಗಿದೆ.
ಶೇಖಪ್ಪ ಎಂಬ ರೈತ ತನ್ನ ನಾಲ್ಕು ಜಮೀನಲ್ಲಿ ಹತ್ತಿ, ಕಡಲೆ, ಗೋದಿ ಬೆಳೆದಿದ್ದರು. ಇದು ಮಳೆಗೆ ಸಂಪೂರ್ಣವಾಗಿ ನಾಶವಾಗಿದೆ.
ಇದರಿಂದ ಕೈಗೆ ಬಂದ ಬೆಳೆ ಬಾಯಿಗೆ ಬಾರದಾಗಿದೆ. ಕೂಡಲೆ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ರೈತ ಶೇಖಪ್ಪ ಹೇಳಿದ್ದಾರೆ.
ಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇಕೊಪ್ಪ ಭೇಟಿ ನೀಡಿ ವೀಕ್ಷಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಅವರು, ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಗೆ ಸುಮಾರು 1 ಲಕ್ಷ ಎಕರೆ ಬೆಳೆ ನಷ್ಟವಾಗಿದೆ.
ಸರ್ಕಾರ ಈಗ ಸುಮಾರು ಏಳೂವರೆ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ ತಿಂಗಳ 30 ಒಳಗೆ ಹಾನಿಯಾದ ಮನೆಗಳಿಗೂ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.









