ಮಳೆ ಅವಾಂತರ – ರಾಜ್ಯದಲ್ಲಿ 5 ಲಕ್ಷ ಹೆಕ್ಟರ್ ಬೆಳೆ ನಾಶ
ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟರ್ ಬೆಳೆ ನಾಶವಾಗಿದೆ ಎಂದು ಅಂದಾಜಿಸಲಾಗಿದೆ. 30.000 ಹೆಕ್ಟರ್ ತೋಟಗಾರಿಕ ಬೆಳೆ ನಾಶವಾಗಿದೆ. ನಷ್ಟದ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ. ಮುಖ್ಯಮಂತ್ರಿಗಳು ಬೆಳೆ ಹಾನಿಯಾದ ಜಿಲ್ಲೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಪ್ಪಳದಲ್ಲಿ ಸುರಿದ ಮಳೆಗೆ ಭತ್ತ ಸೇರಿ ವಿವಿಧ ಬೆಳೆಗಳು ನಾಶವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಭಾರಿ ಮಳೆಯಿಂದಾಗಿ ಸಾವಿರಾರು ಎಕರೆ ಭತ್ತ ನೀರಿನಲ್ಲಿ ಮುಳುಗಿದೆ.
.ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಗೆ ಹತ್ತಿ, ಕಡಲೆ, ಮೆಣಶಿನಕಾಯಿ, ಜೋಳ ಸೇರಿದಂತೆ ನೂರಾರು ಎಕರೆಯ ಬೆಳೆ ಹಾನಿಯಾಗಿದೆ. ಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇಕೊಪ್ಪ ಭೇಟಿ ನೀಡಿ ವೀಕ್ಷಿಸಿದರು.
ಕೋಲಾರದಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದ್ದು, ಜಿಪಿಎಸ್ ಆಧಾರಿತ ಸರ್ವೇ ಮಾಡಲು ಸೂಚಿಸಲಾಗಿದೆ. ಸರ್ವೇ ವರದಿ ಲಭಿಸಿದ ತಕ್ಷಣವೇ ಬೆಳೆ ಹಾನಿಗೀಡಾದ ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಬೆಳೆ ಪರಿಶೀಲನೆ ಮಾಡುವಾಗ ತಿಳಿಸಿದರು.








