ದೇವೇಗೌಡರ ಕುಟುಂಬ ಬಂದಾಗ ಮಾತ್ರ ಕುಟುಂಬ ರಾಜಕಾರಣ ತರುತ್ತಾರೆ : ಸೂರಜ್ Suraj saaksha tv
ಹಾಸನ : ಸೂರಜ್ ರೇವಣ್ಣ ರಾಜಕೀಯ ಪ್ರವೇಶ ವಿಚಾರವಾಗಿ ಬಿಜೆಪಿ – ಕಾಂಗ್ರೆಸ್ ನಾಯಕರು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಿದ್ದಾರೆ.
ಇದಕ್ಕೆ ಇದೀಗ ಸ್ವತಃ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರ ಕುಟುಂಬ ಬಂದಾಗ ಮಾತ್ರ ಕುಟುಂಬ ರಾಜಕಾರಣ ತರುತ್ತಾರೆ.
ಆದರೆ ಎಲ್ಲಾ ರಾಜಕೀಯ ವ್ಯಕ್ತಿಗಳ ಮನೆಯಲ್ಲಿ ನಾಲ್ಕೈದು ಜನ ರಾಜಕೀಯದಲ್ಲಿ ಇದ್ದಾರೆ ಎಂದು ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಿಂದ ಕನಕಪುರದವರೆಗೂ ಒಂದೊಂದು ಕುಟುಂಬದಲ್ಲಿ ಎಷ್ಟೆಷ್ಟು ಜನ ರಾಜಕಾರಣದಲ್ಲಿದ್ದಾರೆ ಎಂದು ಲೆಕ್ಕ ಹಾಕಿ.
ಶಿವಮೊಗ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಕುಟುಂಬ ರಾಜಕಾರಣ ಇದ್ದಿದ್ದೇ.
ದೇವೇಗೌಡರ ಕುಟುಂಬ ಬಂದಾಗ ಮಾತ್ರ ಕುಟುಂಬ ರಾಜಕಾರಣ ತರುತ್ತಾರೆ ಎಂದು ಸೂರಜ್ ಕಿಡಿಕಾರಿದ್ದಾರೆ.
ಇನ್ನು ನಮ್ಮ ತಾತ ತುಂಬಾ ಯೋಜನೆ ಮಾಡಿ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ನಾನು ಅನಿರೀಕ್ಷಿತವಾಗಿ ಅಭ್ಯರ್ಥಿಯಾಗಿದ್ದೇನೆ. ನಾನು ಅಭ್ಯರ್ಥಿಯಾಗುವ ಅಪೇಕ್ಷೆ ಇರಲಿಲ್ಲ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.