ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಮುಸಲ್ಮಾನರೇ ಸಿಗೋದು : ಜಮೀರ್
ಮಂಡ್ಯ : ಬಿಜೆಪಿಗೆ ಸಹಾಯ ಮಾಡಿದಂತೆ ಆಗಬೇಕು ಎಂಬ ಕಾರಣಕ್ಕೆ ಸೋಲುವ ಕಡೆ ಮುಸಲ್ಮಾನರಿಗೆ ಟಿಕೆಟ್ ಕೊಟ್ಟಿದ್ದಾರೆ.
ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಮುಸಲ್ಮಾನರೇ ಸಿಗೋದು ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿದ್ದಾರೆ ಎಂದು ಆರೋಪಿಸಿದರು.
ಮಡಿಕೇರಿಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಜೆಡಿಎಸ್ ಎಂಎಲ್ ಸಿ ಟಿಕೆಟ್ ಕೊಟ್ಟಿದ್ದಾರೆ. ಅಲ್ಲಿ ಮುಸ್ಲಿಂ ಅಭ್ಯರ್ಥಿ ಗೆಲ್ಲೋಕೆ ಸಾಧ್ಯವೇ ಎಂದು ಪ್ರಶ್ನಿಸಿದರು.
ಮುಸ್ಲಿಮರಿಗೆ ಟಿಕೆಟ್ ಕೊಟ್ಟಂತೆಯೂ ಆಗಬೇಕು, ಬಿಜೆಪಿಗೆ ಸಹಾಯ ಮಾಡಿದಂತೆಯೂ ಆಗಬೇಕು ಎಂಬ ಕಾರಣಕ್ಕೆ ಸೋಲುವ ಕಡೆ ಟಿಕೆಟ್ ಕೊಟ್ಟಿದ್ದಾರೆ.
ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಮುಸಲ್ಮಾನರೇ ಸಿಗೋದು ಎಂದು ಜಮೀರ್ ಗರಂ ಆದರು.
ಇನ್ನು ಮುಂದುವರೆದು ಜೆಡಿಎಸ್ ವಿರುದ್ಧ ಕಿಡಿಕಾರಿದ ಜಮೀರ್, ಜೆಡಿಎಸ್‍ನಿಂದ ನೂರಕ್ಕೆ ನೂರರಷ್ಟು ಮುಸಲ್ಮಾನರಿಗೆ ಅನ್ಯಾಯವಾಗುತ್ತಿದೆ.
ಜೆಡಿಎಸ್ ಗೆಲ್ಲುವ ಕಡೆ ಅಲ್ಪಸಂಖ್ಯಾತರು ಬೇಕಾಗಿಲ್ಲ. ಮಂಡ್ಯ ಜನರು ಈಗಾಗಲೇ ಜೆಡಿಎಸ್ ತಿರಸ್ಕರಿಸಿದ್ದಾರೆ ಎಂದು ಕಿಡಿಕಾರಿದರು.