ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಎರಡುಸಾವಿರದ ಇಪ್ಪತ್ತು ಗೋಪಿಕೆಯರು” ಹಾಡುಗಳ ರಿಲೀಸ್ ಮಾಡಿದ ಪೊಲೀಸ್ ಅಧಿಕಾರಿ ರವಿಕಾಂತೇಗೌಡ..!

Namratha Rao by Namratha Rao
November 26, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಎರಡು ಸಾವಿರದ ಇಪ್ಪತ್ತು ಗೋಪಿಕೆಯರು” ಹಾಡುಗಳ ರಿಲೀಸ್ ಮಾಡಿದ ಪೊಲೀಸ್ ಅಧಿಕಾರಿ ರವಿಕಾಂತೇಗೌಡ..!

eredu savirada ippattu gopikeyaru

Related posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

August 26, 2026
saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

August 26, 2026

ವಿ ನಾರಾಯಣಸ್ವಾಮಿ ನಿರ್ದೇಶನದ , ಕುಚ್ಚಣ್ಣ ಶ್ರೀನಿವಾಸನ್ ಬಂಡವಾಳ ಹೂಡಿರುವ , ಇಂಚರ ಮೀಡಿಯಾದಿಂದ ನಿರ್ಮಾಣವಾಗಿರುವ “ಎರೆಡು ಸಾವಿರದ 20 ಗೋಪಿಯರು” ಕನ್ನಡ ಸಿನಿಮಾದ ಟ್ರೇಲರ್ ಈಗಾಗಲೇ ಯೂಟ್ಯುಭ್ ನಲ್ಲಿ ರಿಲೀಸ್ ಜನ ಮೆಚ್ಚುಗೆ ಪಡೆದುಕೊಂಡಿದೆ.. ಇದೀಗ ಈ ಸಿನಿಮಾದ ಹಾಡುಗಳನ್ನ   ಸಾಹಿತಿಯೂ ಆಗಿರುವ ಪೊಲೀಸ್ ಅಧಿಕಾರಿ ರವಿಕಾಂತೇಗೌಡ ಅವರು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭಕೋರಿದ್ದಾರೆ..  ಚಿತ್ರದಲ್ಲಿ ಕಿರುತೆರೆ ನಟಿ , ಪಾರ್ವತಿಯಾಗಿ ಮಹದೇವ ಧಾರವಾಹಿಯಲ್ಲಿ ಖ್ಯಾತಿ ಪಡೆದ ನಟಿ ಪ್ರಿಯಾಂಕಾ ಚಿಂಚೊಳಿ ಕಾಣಿಸಿಕೊಂಡಿದ್ದಾರೆ..  ನಟಿ ಧರಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಬಾಲಾಜಿ ಶರ್ಮಾ , ನಂದೀಶ್ , ಗಿರೀಶ್, ಮಮತಾ , ವರ್ಷಿಣಿ , ಸರಿಗಮ ವಿಜಿ, ಮೈಸೂರ್ ರಮಾನಂದ್ ನಟಿಸಿದ್ದಾರೆ..

ಸಿನಿಮಾಗೆ ಶ್ರೀಧರ್ ವಿ ಸಂಭ್ರಮ್  ಮ್ಯೂಸಿಕ್ ಚಿತ್ರಕ್ಕಿದೆ.. ಹಾಡು ರಿಲೀಸ್ ಆದ ಬಳಿಕ ಮಾತನಾಡಿದ ನಿರ್ಮಾಕರು ,  ಚಿತ್ರ ಮಾಡುವ ನಿಟ್ಟಿನಲ್ಲಿ ಮೂರು ಪ್ರಮುಖ ಹಂತಗಳಿರುತ್ತವೆ. ಮೊದಲನೆಯದು ಬರವಣಿಗೆಯ ಹಂತ. ಚಿತ್ರಕಥೆ ಎನ್ನುವುದು ಸವಾಲಿನ ಕೆಲಸ. ಏಕಾಂಗಿಯಾಗಿ ಚಿತ್ರಕಥೆ ಬರೆಯುವುದಕ್ಕೆ ಸಾಧ್ಯವಿಲ್ಲ. ಬರೆದೂ ಇಲ್ಲ ಎಂಬುದು ನನ್ನ ನಂಬಿಕೆ. ಗುಂಪಿನಲ್ಲಿ ಚರ್ಚೆ ಮಾಡಿಕೊಂಡು, ಮಾತಾಡಿಕೊಂಡು ಮಾಡುವ ಕ್ರಿಯೆ ಅದು. ನಾನು, ನಮ್ಮ ಚಿತ್ರದ ನಿರ್ದೇಶಕ ನಾರಾಯಣಸ್ವಾಮಿ ಒಂದೂವರೆ ವರ್ಷಗಳ ಕಾಲ ಕೂತು ಚಿತ್ರಕಥೆ ಮಾಡಿದ್ದೇವೆ. ಎರಡನೆಯ ಹಂತ ಚಿತ್ರೀಕರಣ. ಮೂರನೆಯ ಹಂತ ಹಾಡುಗಳಿಗೆ ಸಂಗೀತ ಅಳವಡಿಸುವುದು. ಯಾವುದೇ ಚಿತ್ರದ ಸನ್ನಿವೇಶವನ್ನು ಪರಿಣಾಮಕಾರಿಯಾಗಿ ಪ್ರೇಕ್ಷಕರಿಗೆ ತಲುಪಿಸಬೇಕಾದರೆ ಒತ್ತಾಸೆಯಾಗಿ ಸಂಗೀತ ಇರಬೇಕಾಗುತ್ತದೆ. ಮೂಲಧಾರೆಯ ಸಿನಿಮಾಗಳಲ್ಲಿ ಸಂಗೀತ ಪ್ರಧಾನ ಪಾತ್ರ ವಹಿಸುತ್ತದೆ. ನನಗೆ ವೈಯಕ್ತಿಕವಾಗಿ ಈ ಮೂರನೆಯ ಹಂತ ಬಹಳ ಇಷ್ಟದ್ದು. , ಮೂರು ಹಾಡುಗಳು ನಮ್ಮ ಚಿತ್ರದಲ್ಲಿದೆ. ಹಾಡು ಎಂದರೆ ಬರೀ ಸಂಗೀತವಷ್ಟೇ ಅಲ್ಲ, ಅದಕ್ಕೆ ಪೂರಕವಾಗಿ ಸಾಹಿತ್ಯ ಬೇಕು. ಅದು ಅದ್ಭುತ ಪ್ರಕ್ರಿಯೆ. ದೊಡ್ಡದೊಡ್ಡ ಕವಿಗಳು ಚಿತ್ರಗೀತೆ ಬರೆಯುವುದಕ್ಕೆ ಹೋಗಿ ಕಷ್ಟಪಟ್ಟಿದ್ದನ್ನು ನಾವು ನೋಡಿದ್ದೇವೆ. ಕಥೆಗೆ, ಸನ್ನಿವೇಶಕಕ್ಕೆ ಮತ್ತು ನಿರ್ದೇಶಕರ ಕಲ್ಪನೆಗೆ ತಕ್ಕ ಹಾಗೆ ಹಾಡುಗಳನ್ನು ಬರೆಯುವುದು ಸುಲಭವಲ್ಲ.

https://www.youtube.com/watch?v=r7xoVlri4Zs

ಹೃದಯಶಿವ, ಗೌಸ್​ಪೀರ್​ ಮತ್ತು ಮಹೇಂದ್ರ ಗೌಡ, ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಶ್ರೀಧರ್​ ಸಂಗೀತ ಸಂಯೋಜಕರಷ್ಟೇ ಅಲ್ಲ, ಒಳ್ಳೆಯ ಸಾಹಿತ್ಯ ಅಭಿರುಚಿ ಇದೆ. ಅವರೇ ಬರೆಯಬಲ್ಲರು. ಆದರೆ, ಬರೆಯುತ್ತಿಲ್ಲ ಅಷ್ಟೇ. ಸಾಹಿತ್ಯವು ಸಂಗೀತಕ್ಕೆ ಹೊಂದುತ್ತದೋ ಇಲ್ಲವೋ ಎಂಬುದು ಅವರು ಚೆನ್ನಾಗಿ ಜಡ್ಜ್​ ಮಾಡುತ್ತಾರೆ. ರವಿಕಾಂತೇಗೌಡರು ಬರೀ ಒಬ್ಬ ಪೊಲೀಸ್​ ಅಧಿಕಾರಿಯಲ್ಲ. ಅವರೊಬ್ಬ ಸಾಹಿತಿ. ಅವರ ತಂದೆ ಬೆಸಗರಹಳ್ಳಿ ರಾಮಣ್ಣ, ಕನ್ನಡದ ಜನಪ್ರಿಯ ಕಥೆಗಾರ. ಇವರು ಸಹ ಸಾಹಿತ್ಯ ರಚಿಸಿದ್ದಾರೆ. ಬಹುಶಃ ನಿವೃತ್ತಿಗಾಗಿ ಕಾಯುತ್ತಿದ್ದಾರೆ ಅಂದುಕೊಂಡಿದ್ದೇನೆ. ಆಮೇಲೆ ಅವರ ಹಲವು ಪುಸ್ತಕಗಳು ಪ್ರಕಟವಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಅವರಿಗೆ ಆಹ್ವಾನ ಕಳಿಸಿದಾಗ, ವಾಟ್ಸಾಪ್​ ನಲ್ಲೇ ಕವನ ಕಳಿಸಿದರು. ಬಹಳ ಖುಷಿಯಾಯಿತು. ಒಳ್ಳೆಯ ಸಾಲುಗಳಿವೆ. ಅವರು ಮುಖ್ಯ ಅತಿಥಿಯಾಗಿ ಬಂದಿರುವುದು ಸಂತೋಷ ಎಂದರು..

ಇದೇ ವೇಳೆ ಮಾತನಾಡಿದ ರವಿಕಾಂತೇಗೌಡ್ರು,  ನನ್ನ ಸೀನಿಯರ್ ಆದ ಕುಚ್ಚಣ್ಣ ಶ್ರೀನಿವಾಸ್ ಅವರು,  ನನಗೆ ಸಿನಿಮಾ ನಿರ್ಮಾಣದ ಬಗ್ಗೆ ತಿಳಿಸಿದ್ದರು.ಈಗ ಆಡಿಯೋ ಬಿಡುಗಡೆಗೆ ನನ್ನ ಆಹ್ವಾನಿಸಿದ್ದಾಗ, ಚಿತ್ರ ಈಗಾಗಲೇ ಬಿಡುಗಡೆ ಹಂತಕ್ಕೆ ಬಂದಿರುವ ಸುದ್ದಿ ತಿಳಿದು ಸಂತೋಷವಾಯಿತು. ಮಲೆಯಾಳಂ, ತಮಿಳು ಭಾಷೆಗಳಲ್ಲಿ ಕಡಿಮೆ ದುಡ್ಡು ಖರ್ಚು ಮಾಡಿ ಉತ್ತಮ ಚಿತ್ರಗಳನ್ನು ನಿರ್ಮಾಣ ಮಾಡುತ್ತಾರೆ. ಅಲ್ಲಿ ಆ ಚಿತ್ರಗಳು ಯಶಸ್ವಿಯಾಗಿದುಂಟು. ಈ ಚಿತ್ರದ ಬಗ್ಗೆ ಕೇಳಿದಾಗ ನನಗೂ ಉತ್ತಮವಾದ ಕಥೆಯುಳ್ಳ ಚಿತ್ರವೆನಿಸುತ್ತಿದೆ. ನಾವು ಕೂಡ ಉತ್ತಮ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಇಲ್ಲವಾದಲ್ಲಿ, ಕೆಟ್ಟ ಚಿತ್ರಗಳನ್ನು ನೋಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಚಿತ್ರದ ಹಾಡುಗಳನ್ನು ಕೇಳಿದಾಗ ಕಿವಿಗೆ ಇಂಪಾಯಿತು.‌ ಶ್ರೀಧರ್ ಒಳ್ಳೆಯ ಸಂಗೀತ ನೀಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.. ಅಲ್ಲದೇ  ಪುನೀತ್ ರಾಜಕುಮಾರ್ ಅವರನ್ನು ನೆನೆದು ಭಾವುಕರಾದರು.

‘ರಶ್ಮಿಕಾ ಊಟ’ : ತಿನ್ನೋದನ್ನೂ ಹೇಳಿ ಕೊಟ್ಟ ‘ಕಿರಿಕ್’ ಬೆಡಗಿ..!  

Tags: #saakshatvbengalurucinibazaareredu savirada ippattu gopikeyarukannada filmkarnatakaSandalwood
ShareTweetSendShare
Join us on:

Related Posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

by admin
August 26, 2026
0

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram