ಎ.ಮಂಜು ಕಾಂಗ್ರೆಸ್ ಸೇರಲ್ಲ, ಬಂದರೂ ನಾವು ಸೇರಿಸಿಕೊಳ್ಳಲ್ಲ : ಸಿದ್ದರಾಮಯ್ಯ
ಮೈಸೂರು: ವಿಧಾನ ಪರಿಷತ್ತು ಚುನಾವಣೆ ಬಗ್ಗೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಯಾರೊಂದಿಗೂ ಹೊಂದಾಣಿಕೆ ಇಲ್ಲ. ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ. ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ ಎಂದಿದ್ದಾರೆ..
ಅಲ್ಲದೇ ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ ಕಣಕ್ಕೆ ಇಳಿಸಿರೋದು ಬಿಜೆಪಿಯವರು. ನಮ್ಮವರು ನಮ್ಮ ಪರ ಕೆಲಸ ಮಾಡ್ತಿದ್ದಾರೆ. ಲಖನ್ ಜಾರಕಿಹೋಳಿ ಬಿಜೆಪಿಯಲ್ಲೇ ಇದ್ದವರು. ಹೀಗಾಗಿ ಗೊಂದಲ ಇರೋದು ಬಿಜೆಪಿಯಲ್ಲಿ.
ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೇ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತದಿಂದ ಸೋತಿದ್ದೇವೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ. ಅಲ್ಲದೇ ಎ.ಮಂಜು ಕಾಂಗ್ರೆಸ್ ಸೇರಲ್ಲ. ಅವರು ಕಾಂಗ್ರೆಸ್ ಗೆ ಬರುವುದಾಗಿಯೂ ಕೇಳಿಲ್ಲ. ಬಂದರೂ ನಾವು ಸೇರಿಸಿಕೊಳ್ಳಲ್ಲ ಎಂದಿದ್ದಾರೆ..








