ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ : ಸಿದ್ದರಾಮಯ್ಯ
ಮೈಸೂರಿನಲ್ಲಿ ನಮ್ಮ ಬೆಂಬಲಿತ ಮತದಾರರಿಗೆ ಸಿಂಗಲ್ ಓಟ್ ಮಾಡಲು ಹೇಳಿದ್ದೇವೆ. ಎರಡನೇ ಪ್ರಾಶಸ್ತ್ಯ ಮತವನ್ನ ಯಾರಿಗೂ ಹಾಕಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ನಾವು ಯಾರೊಂದಿಗೂ,ಯಾವ ಕ್ಷೇತ್ರದಲ್ಲೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ.
ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ..








