ಎಫ್ಐಎಚ್ ಜೂ.ವಿಶ್ವಕಪ್ ಹಾಕಿ : ತವರಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ – ಕ್ವಾರ್ಟರ್ ಫೈನಲ್ ಪ್ರವೇಶ
ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ಎಫ್ಐಎಚ್ ಪುರುಷರ ಜ್ಯೂನಿಯರ್ ವಿಶ್ವಕಪ್ ಹಾಕಿ ಪಂದ್ಯಾವಳಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ 8-2 ರಿಂದ ಪೋಲೆಂಡ್ ತಂಡವನ್ನು ಮಣಿಸಿ, ಕ್ವಾರ್ಟರ್ ಫೈನಲ್ ಹಂತ ಕಂಡಿತು.
`ಬಿ’ ಗುಂಪಿನಲ್ಲಿ ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ ಭಾರತ, ಒಟ್ಟು ಆರು ಅಂಕಗಳೊಂದಿಗೆ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದು ಎಂಟರ ಹಂತ ಕಂಡಿತು. ಆಡಿದ ಮೂರೂ ಪಂದ್ಯಗಳಲ್ಲಿ ಜಯ ಕಂಡ ಫ್ರಾನ್ಸ್ ಗುಂಪಿನಲ್ಲಿ ಅಗ್ರ ಸ್ಥಾನದೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿತು.
ಪಂದ್ಯದ ನಾಲ್ಕನೇ ನಿಮಿಷದಲ್ಲಿ ಭಾರತಕ್ಕೆ ದೊರೆತ ಪೆನಾಲ್ಟಿ ಕಾರ್ನರ್ ಅನ್ನು ಸಂಜಯ್ ಗೋಲಾಗಿ ಪರಿವರ್ತಿಸಿ ತಂಡಕ್ಕೆ ಆರಂಭದಲ್ಲಿಯೇ ಮುನ್ನಡೆ ನೀಡಿದರು.
ಮುಂದೆ ಪಂದ್ಯದ ಎಂಟನೇ ನಿಮಿಷದಲ್ಲಿ ಭಾರತಕ್ಕೆ ಮತ್ತೊಂದು ಪೆನಾಲ್ಟಿ ಕಾರ್ನರ್ ದೊರಕಿತು. ಅರಜೀತ್ ಸಿಂಗ್ ಹುಂದಾಲ್, ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ತಂಡದ ಮುನ್ನಡೆಯನ್ನು








