ಬಸ್ – ಕಾರು ಮುಖಾಮುಖಿ ಡಿಕ್ಕಿ : ಚಾಲಕ ಸಾವು
ಹುಬ್ಬಳ್ಳಿ : ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಕಾರು ಹಾಗೂ ಮುಂಬೈಯಿಂದ ಬೆಂಗಳೂರು ಕಡೆ ಬರುತ್ತಿದ್ದ ಬಸ್ ನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರು ಚಾಲಕ ಮೃತಪಟ್ಟಿದ್ದರೇ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನು ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.









