ರೂಪಾಂತರಿ ವೈರಸ್ ಆತಂಕ : ರಾಜ್ಯದ ಗಡಿಯಲ್ಲಿ ಹೈ ಅಲರ್ಟ್ karnataka saaksha tv
ಮೈಸೂರು : ಕೇರಳದಲ್ಲಿ ಕೊರೊನಾ ವೈರಸ್ ಹಾಗೂ ರೂಪಾಂತರಿ ವೈರಸ್ ಆತಂಕ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನೆರೆಯ ಕೇರಳದಲ್ಲಿ ಕೊರೊನಾ ಜೊತೆಗೆ ನ್ಯೂರೋ, ನಿಫಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುವ ಪ್ರತಿವಾಹನ ಸವಾರರ ತಪಾಸಣೆ ನಡೆಸಲಾಗುತ್ತಿದೆ. ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಅವರಿಗೆ ರಾಜ್ಯಕ್ಕೆ ಬರಲು ಅವಕಾಶ ಮಾಡಿಕೊಡಲಾಗುತ್ತಿದೆ..
72 ಗಂಟೆಯೊಳಗೆ ಆರ್.ಟಿ.ಪಿ.ಸಿ.ಆರ್ ತಪಾಸಣೆ ಮಾಡಿಸಿರಬೇಕು. ಗೂಡ್ಸ್ ವಾಹನ ಚಾಲಕರಿಗೆ 15 ದಿನಗಳ ಕಾಲ ರಿಯಾಯಿತಿ ನೀಡಲಾಗಿದೆ. ಮೈಸೂರು ಭಾಗದಿಂದ ಕೇರಳಕ್ಕೆ ತರಕಾರಿ ಸರಬರಾಜುಗುತ್ತದೆ. ಈ ಕಾರಣದಿಂದ ಪ್ರತಿದಿನ ನೂರಾರು ಗೂಡ್ಸ್ ವಾಹನ ಸಂಚಾರಿಸುತ್ತಿವೆ. ಪ್ರತಿದಿನ ಗೂಡ್ಸ್ ವಾಹನ ಚಾಲಕರು ತಪಾಸಣೆ ಮಾಡಿಸಲು ಕಷ್ಟ ಎಂಬ ಕಾರಣಕ್ಕೆ ರಿಯಾಯಿತಿ ನೀಡಲಾಗಿದೆ. ಸದ್ಯ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ರಾಜ್ಯಕ್ಕೆ ಕಳುಹಿಸಲಾಗುತ್ತಿದೆ.









