ಪರಸ್ಪರ ಅವಾಚ್ಯ ಶಬ್ಧಗಳಿಂದ ಬೈದಾಡಿಕೊಂಡ ಡಾಕ್ಟರ್ ಮತ್ತು ಪೊಲೀಸ್ belagavi saaksha tv
ಬೆಳಗಾವಿ : ಹೊಸ ರೂಪಾಂತರಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮಹಾರಾಷ್ಟ್ರದಿಂದ ಬರುತ್ತಿರುವ ಪ್ರಯಾಣಿಕರನ್ನು ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚೆಕ್ ಪೋಸ್ಟ್ ಬಳಿ ತಪಾಸಣೆ ಮಾಡಲಾಗುತ್ತಿದೆ.
ಈ ವೇಳೆ ಡಾಕ್ಟರ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಕೊಲ್ಲಾಪುರದಿಂದ ಆಗಮಿಸಿದ್ದ ಡಾಕ್ಟರ್ ಸ್ವಾಮಿ ನಂದಿಮಠ ಎಂಬುವವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ.
ತಪಾಸಣೆ ವೇಳೆ ಪೊಲೀಸರು ಅವಾಚ್ಯ ಶಬ್ದ ಗಳಿಂದ ನಿಂದನೆ ಮಾಡಿದ್ದಾರೆ ಎಂದು ಡಾ.ಸ್ವಾಮಿ ಆರೋಪಿಸಿ ವಾದಕ್ಕೆ ಇಳಿದಿದ್ದಾರೆ.
ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಇದರಿಂದ ಡಾಕ್ಟರ್ ನನ್ನು ಹಿಡಿದು ಪೊಲೀಸರು ಚೆಕ್ ಪೋಸ್ಟ್ ನಲ್ಲಿ ಕೂರಿಸಿದ್ದಾರೆ.









