ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ
ಕೋಲಾರ : ಬಿಜೆಪಿ ಜೊತೆ ಯಾವುದೇ ಮೈತ್ರಿ, ಒಳ ಒಪ್ಪಂದದ ಬಗ್ಗೆ ಚರ್ಚೆಯಾಗಿಲ್ಲ. ಯಡಿಯೂರಪ್ಪ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮೈತ್ರಿ ಬಗ್ಗೆ ಮಾತನಾಡದೆ, ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್ ಸಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಯಾವ ಟೀಂ ನಲ್ಲಿದೆ. ಬಿಜೆಪಿ ಜೊತೆ ಯಾವುದೇ ಮೈತ್ರಿ, ಒಳ ಒಪ್ಪಂದದ ಬಗ್ಗೆ ಚರ್ಚೆಯಾಗಿಲ್ಲ. ಯಡಿಯೂರಪ್ಪ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮೈತ್ರಿ ಬಗ್ಗೆ ಮಾತನಾಡದೆ, ಆರೋಪ ಮಾಡುವುದು ಸರಿಯಲ್ಲ.
ಬಿಜೆಪಿ ಗೆಲುವಿಗೆ ಸಹಕರಿಸಿ ಅಂತಾ ಹೇಳುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವು ಬಗ್ಗೆ ಬೇಕಾಗಿಲ್ಲ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ. ಎಂಎಲ್ ಸಿ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ಎರಡ್ಮೂರು ದಿನಗಳಲ್ಲಿ ತೀರ್ಮಾನಿಸಲಾಗುವುದು. ಆರು ಕ್ಷೇತ್ರಗಳ ಗೆಲುವಿಗೆ ಶ್ರಮ ವಹಿಸುತ್ತೇವೆ ಎಂದರು.
ಜೆಡಿಎಸ್ ಪಕ್ಷದ ಹಿನ್ನಡೆ ಬಗ್ಗೆ ಚರ್ಚಿಸಲಾಗಿದೆ. 2023ರ ಚುಜಾವಣೆಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರಲು ಯೋಜನೆಗಳು ಸಿದ್ದ. ಕಡಿಮೆ ಅಂತರದಲ್ಲಿ ಸೋತಿರುವ ಕಡೆ ಪಕ್ಷದ ಸಂಘಟನೆ. ಶ್ರೀನಿವಾಸಗೌಡರ ಬಗ್ಗೆ ಯಾವುದೇ ಮೃಧು ಧೋರಣೆ ಇಲ್ಲ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಚುನಾವಣೆ ರಣತಂತ್ರ ನಮ್ಮ ಪಕ್ಷಕ್ಕೆ ಬೇಕಾಗಿಲ್ಲ. ಜೆಡಿಎಸ್ ಅಭ್ಯರ್ಥಿ ಗೆಲುವಿಗಷ್ಟೇ ಪ್ರಯತ್ನ ಮಾಡುತ್ತಿದ್ದೇವೆ. ನಾವು ಯಾವುದೇ ಆಪರೇಷನ್ ಮಾಡಲ್ಲ.
ನಮ್ಮ ಪಕ್ಷಕ್ಕೆ ಬರಲು ಎದುರುತ್ತಿದ್ದಾರೆ. ನಾವು ಯಾವುದೇ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿ ಇಲ್ಲ. ಬಿಜೆಪಿ ನಾಯಕರು ಕಾಂಗ್ರೆಸ್ ನವರ ಜೊತೆ ಸಂಪರ್ಕದಲ್ಲಿದ್ದಾರೆ. ನಾವು ಆರು ಕ್ಷೇತ್ರಗಳ ಗೆಲುವಿಗೆ ತೀರ್ಮಾನಿಸಿದ್ದೇವೆ. ಬಿಜೆಪಿಗೆ ಹಣದ ಕೊರತೆಯಿಲ್ಲ, ಆದ್ರೆ, ಚುನಾವಣೆಯಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ.
19 ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನ ಎರಡ್ಮೂರು ದಿನಗಳಲ್ಲಿ ತಿಳಿಸಲಾಗುವುದು. 123 ಸೀಟ್ ಗೆಲ್ಲಲು ಯಾವ ರೀತಿ ತಂತ್ರ ಮಾಡಬೇಕು ಅನ್ನೋದರ ನಿರ್ಧಾರದ ಮೇಲೆ 19 ಕ್ಷೇತ್ರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.









