ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ | ಇಬ್ಬರು ಸಾವು davanagere saaksha tv
ದಾವಣಗೆರೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಮಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇದಿಕೆರೆ ಗ್ರಾಮದ ಅಭಿಷೇಕ್(20), ತಣಿಗೆರೆ ಗ್ರಾಮದ ಕಾರ್ತಿಕ್(18) ಮೃತ ದುರ್ದೈವಿಗಳು.
ವೇಗವಾಗಿ ಬೈಕ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸದ್ಯ ಮೃತದೇಹಗಳನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









