ಲಾರಿ ಮತ್ತು ಮೆಟಾಡೋರ್ ಮುಖಾಮುಖಿ ಡಿಕ್ಕಿ 18 ಮಂದಿ ಸಾವು
ಒಂದು ಶವದ ಸಂಸ್ಕಾರಕ್ಕೆಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಹೊರಟಿದ್ದ ಮೆಟಾಡೋರ್ ವಾಹನವು ಅಪಘಾಕ್ಕೆ ಒಳಗಾಗಿ 18 ಜನ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 12 ಗಂಟೆಯ ಸುಮಾರಿಗೆ ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 18 ಮಂದಿ ಸಾವನ್ನಪ್ಪಿ, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರು, ಮಹಿಳೆಯ ಶವವನ್ನು ಅಂತ್ಯಸಂಸ್ಕಾರಕ್ಕೆಂದು ಮೆಟಾಡೋರ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು ವಾಹನದ ಅತಿಯಾದ ವೇಗ ಮತ್ತು ದಟ್ಟವಾದ ಮಂಜು ಅಡ್ಡ ಬಂದಿದ್ದರಿಂದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮತ್ತೆ ಬಂದ ಮಳೆ, ರಾಜ್ಯದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
28 ಮನೆ 16 ನಿವೇಶನ, ಭ್ರಷ್ಟ ಅಧಿಕಾರಿ ಪರಪ್ಪನ ಅಗ್ರಹಾರದ ಜೈಲಿಗೆ








