ಮಂಗಳೂರು ಚಾರ್ಮಾಡಿ ರಸ್ತೆಯ ಚಾರ್ಮಾಡಿ ಘಾಟ್ ನ 7 – 8ನೇ ತಿರುವಿನ ಮಧ್ಯೆ ಒಂಟಿ ಸಲಗವೊಂದು ಕಾಣಿಸಿಕೊಂಡು ಸವಾರರ ಆತಂಕಕ್ಕೆ ಕಾರಣವಾದ ಘಟನೆ ಗುರುವಾರ ನಡೆದಿದೆ. ಚಾರ್ಮಾಡಿ ಘಾಟ್ 7-8ನೇ ತಿರುವಿನ ಮಧ್ಯೆ ಸಂಜೆ 5.45 ಕ್ಕೆ ಒಂಟಿ ಸಲಗವೊಂದು ರಸ್ತೆಯಲ್ಲಿ ತರಕಾರಿ ಸಾಗಾಟದ ವಾಹನ ಸವಾರರಿಗೆ ಎದುರಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ಮತ್ತು ಸಿಬ್ಬಂದಿಗಳು ಆಗಮಿಸಿದರು. ವಾಹನ ಸವಾರರಿಗೆ ಆ ಮಾರ್ಗದಲ್ಲಿ ಸಂಚರಿಸದಂತೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಂಡರು.
ಎಪ್ರಿಲ್ 8 ರಂದು ಕೂಡ ಇದೇ ಸ್ಥಳದಲ್ಲಿ ಒಂಟಿ ಸಲಗ ತಡರಾತ್ರಿ ಪ್ರತ್ಯಕ್ಷವಾಗಿತ್ತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಮನುಷ್ಯರ ಓಡಾಟ ವಾಹನಗಳ ಸಂಚಾರ ಕಡಿಮೆಯಾಗಿರುವ ಕಾರಣ ಪ್ರಾಣಿಗಳು ನಾಡಿಗೆ ಕಾಲಿಡುತ್ತಿವೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








