`ಆ ಕೊಳಕು ನಮಗೆ ಬೇಡ'”: ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ವಾಗ್ದಾಳಿ
ಬೆಳಗಾವಿ : ನಮ್ಮ ಕಾಂಗ್ರೆಸ್ ಪಕ್ಷ ಕ್ಲೀನ್ ಆಗಿದೆ. ಹೀಗಾಗಿ ಆ ಕೊಳಕು ನಮಗೆ ಬೇಡ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಕುರಿತ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಥೂ ಥೂ ಎಂಬ ವಿಚಾರಕ್ಕೆ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಅದು ಬಿಜೆಪಿ ಸಂಸ್ಕøತಿಯ ಪ್ರತಿಬಿಂಬ, ಬಿಜೆಪಿಯಲ್ಲಿ ಶೇ 50 ರಷ್ಟು ಹೆಣ್ಣು ಮಕ್ಕಳಿದ್ದಾರೆ. ಸಂಸ್ಕೃತಿ, ಸಂಸ್ಕಾರ ಇರುವಂತ ಪಕ್ಷ ಎಂದು ಬೊಬ್ಬೆ ಹೊಡೆಯುತ್ತಾರೆ.
ಈಗ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉತ್ತರ ಕೊಡಬೇಕು ಎಂದು ತಿವಿದರು.
ಕೆಲದಿನಗಳಿಂದೆ ಪರ್ತಕರ್ತರು ರಮೇಶ್ ಜಾರಕಿಹೊಳಿ ಅವರ ಬಳಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ರಮೇಶ್ ಜಾರಕಿಹೊಳಿ ಥೂ ಥೂ ಎಂದು ಅಲ್ಲಿಂದ ಹೊರಟಿದ್ದರು.









