ಟೆಸ್ಟ್ ಕ್ರಿಕೆಟ್ ನಲ್ಲಿ ಅಶ್ವಿನ್ ದಾಖಲೆ : ಕಂಗ್ರಾಟ್ಸ್ ಸೋದರ ಎಂದ ಭಜ್ಜಿ
ಕಾನ್ಪುರ : ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಮ್ಯಾಚ್ ನಲ್ಲಿ ಸ್ಪಿನ್ನರ್ ಅಶ್ವಿನ್ ವಿಕೆಟ್ ಬೇಟೆಯಾಡಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್ ನಲ್ಲಿ ಭಾರತದ ಪರ ಅಶ್ವಿನ್ ಮೂರು ವಿಕೆಟ್ ಪಡೆದು ಮಿಂಚಿದರು.
ಆ ಮೂಲಕ ಭಾರತದ ಪರ ಹೆಚ್ಚು ವಿಕೆಟ್ ಪಡೆದ 3ನೇ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನವಾದ ಇಂದು ಅಶ್ವಿನ್, ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಬ್ಯಾಟರ್ ಟಾಮ್ ಲೇಥಮ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದರು.
80ನೇ ಟೆಸ್ಟ್ ಪಂದ್ಯವಾಡಿದ ಅಶ್ವಿನ್ ಈವರೆಗೂ 418 ವಿಕೆಟ್ ಗಳನ್ನು ಪಡೆದಿದ್ದಾರೆ. ಹರ್ಭಜನ್ ಸಿಂಗ್ 103 ಟೆಸ್ಟ್ ಪಂದ್ಯಗಳಿಂದ 417 ವಿಕೆಟ್ ಪಡೆದಿದ್ದಾರೆ.
ತಮ್ಮನ್ನು ಅಶ್ವಿನ್ ಹಿಂದಿಕ್ಕುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಹರ್ಭಜನ್, ಸಹೋದರ ಅಶ್ವಿನ್ ಕಂಗ್ರಾಟ್ಸ್.. ಇಂತಹ ಹಲವಾರು ದಾಖಲೆಗಳು ನಿಮ್ಮದಾಗಲಿ.. ದೇವರ ಆರ್ಶೀವಾದ ನಿಮ್ಮ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.
ಇನ್ನು ಅಂತಿಮ ವಿಕೆಟ್ ಪಡೆಯುವಲ್ಲಿ ಟೀಂ ಇಂಡಿಯಾ ಬೌಲರ್ ಗಳು ವಿಫಲವಾದ ಕಾರಣ ಕಾನ್ಪುರ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.









