ಕಳೆದ 24 ಗಂಟೆಗಳಲ್ಲಿ 8,603 ಹೊಸ ಪ್ರಕರಣಗಳು ಪತ್ತೆ..!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,603 covid19 ಪ್ರಕರಣಗಳು ಪತ್ತೆಯಾಗಿವೆ.
415 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,46,24,360 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,70,530 ಕ್ಕೆ ತಲುಪಿದೆ.
ರಾಷ್ಟ್ರೀಯ ಚೇತರಿಕೆ ದರವು ಪ್ರಸ್ತುತ 98.35 ಪ್ರತಿಶತದಷ್ಟಿದೆ. ಇದು ಮಾರ್ಚ್ 2020 ರಿಂದ ಅತಿ ಹೆಚ್ಚು.
ಕಳೆದ 24 ಗಂಟೆಗಳಲ್ಲಿ ಕೋವಿಡ್ ನಿಂದ 8,190 ಗುಣಮುಖರಾಗಿದ್ದಾರೆ.
ಈವರೆಗೆ 3,40,53,856 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 99,974 ಕ್ಕೆ ಇಳಿಕೆಯಾಗಿದೆ.
ದೇಶದಾದ್ಯಂತ ಈವರೆಗೆ 126.53 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ.
ಶ್ರೇಯಸ್ ಅಯ್ಯರ್ ಗಾಗಿ ಫ್ರಾಂಚೈಸಿಗಳ ಪೈಪೋಟಿ