ಕೊರೊನಾ ಲಾಕ್ ಡೌನ್ ನಡುವೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎ.ಪಿ.ಅರ್ಜುನ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರ್ಜುನ್ ಹಾಸನ ಮೂಲದ ಬಿ.ಆರ್.ಅನ್ನಪೂರ್ಣ ಜೊತೆ ಸರಳವಾಗಿ ಮದುವೆಯಾಗಿದ್ದಾರೆ. ರಾಮಸಂದ್ರದ ಮಹಾಲಕ್ಷ್ಮಿ ಎನ್ ಕ್ಲೇವ್ ನಲ್ಲಿ ಅರ್ಜುನ್ ಮತ್ತು ಅನ್ನಪೂರ್ಣ ಸಪ್ತಪದಿ ತುಳಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲವೇ ಆಪ್ತರ ಸಮ್ಮುಖದಲ್ಲಿ ಅರ್ಜುನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಮದುವೆಗೆ ನಟ ಧ್ರುವ ಸರ್ಜಾ ಮತ್ತು ಕಿಸ್ ಸಿನಿಮಾ ಖ್ಯಾತಿಯ ವಿರಾಟ್ ಸೇರಿದಂತೆ ಕೆಲ ಕಲಾವಿದರು ಮಾತ್ರ ಭಾಗಿಯಾಗಿದ್ದು, ನವ ಜೋಡಿಗೆ ಶುಭಾ ಹಾರೈಸಿದ್ದಾರೆ.

ಇನ್ನು ನಿರ್ದೇಶಕ ಎ.ಪಿ.ಅರ್ಜುನ್ ‘ತಂಗಿಗಾಗಿ’ ಸಿನಿಮಾದಲ್ಲಿ ಗೀತರಚನೆಕಾರನಾಗಿ ಚಿತ್ರರಂಗಕ್ಕೆ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅರ್ಜುನ್ ಅವರು ‘ಅಂಬಾರಿ’, ‘ಅದ್ಧೂರಿ’, ‘ಐರಾವತ’, ಮತ್ತು ‘ರಾಟೆ’ ಸಿನಿಮಾಗಳಲ್ಲಿ ನಿರ್ದೇಶಿಸುವ ಮೂಲಕ ಹೆಸರುವಾಸಿಯಾಗಿದ್ದಾರೆ.
ನಟ ನಿಖಿಲ್ ಕುಮಾರಸ್ವಾಮಿ ಮುಂದಿನ ಸಿನಿಮಾಕ್ಕೂ ಇವರೇ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ ಎಂದು ತಿಳಿದು ಬಂದಿದೆ








