ಕಾರಿಗೆ ಬೆಂಕಿ.. ಐವರು ಸಜೀವ ದಹನ TIRUPATI saaksha tv
ತಿರುಪತಿ : ಕಾರ್ ಗೆ ಬೆಂಕಿ ತಗುಲಿ ಐದು ಮಂದಿ ಮೃತಪಟ್ಟಿರುವ ಘಟನೆ ಚಿತ್ತೂರಿನ ನಾಯ್ಡು ಪೇಟೆ-ಪುತಲಪಟ್ಟು ಹೆದ್ದಾರಿಯಲ್ಲಿ ನಡೆದಿದೆ.
ಚಂದ್ರಗಿರಿ ವಲಯದ ಅಗರಾಳ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಪರಿಣಾಮ ಕಾರಿನಲ್ಲಿ ಒಂದು ವರ್ಷದ ಮಗು ಸೇರಿ ಐವರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ.









