ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಗೆ 3 ಸಾವಿರ ಕೋಟಿ – ಸಿ ಎಂ
ಕಲ್ಯಾಣ ಕರ್ನಾಟಕದ ಉದ್ಯೋಗಾಂಕ್ಷಿಗಳಿಗೆ ಸಿ ಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ಒಂದು ಸಾವಿರದ 400 ಹುದ್ದೆಗಳನ್ನು ಭರ್ತಿ ಮಾಡಲು ಮಂಜೂರಾತಿ ನೀಡಿ, ಈ ಭಾಗದ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಜನರ ಹತ್ತಿರಕ್ಕೆ ಆಡಳಿತವನ್ನು ಕೊಂಡೊಯ್ಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ, ಬೀದರ್ ನಲ್ಲಿ ನಿನ್ನೆ ಪ್ರಚಾರಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮ ಪಂಚಾಯಿತಿಗಳ ಸಶಕ್ತೀಕರಣಕ್ಕೆ ಸರಕಾರ ಅಗತ್ಯ ಕ್ರಮ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.. ಗ್ರಾಮ ಪಂಚಾಯಿತಿಗಳಿಗೆ ಮೂಲಭೂತ ಸೌಕರ್ಯ, ಅಧಿಕಾರ ವಿಕೇಂದ್ರೀಕರಣ, ಕೌಶಲ್ಯಾಭಿವೃದ್ಧಿ ಮುಂತಾದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳ ಸಶಕ್ತೀಕರಣ ಸರ್ಕಾರದ ಗುರಿ ಎಂದರು.








