ಅಜಿಂಕ್ಯಾ ರಹಾನೆ, ಮಯಾಂಕ್ ಗೆ ಶಾಕ್
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡು ಜೋಷ್ ನಲ್ಲಿದೆ.
ಇದೇ ಡಿಸೆಂಬರ್ 26ಕ್ಕೆ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಲಿದೆ.
ಬಹುತೇಕ ಕಿವೀಸ್ ವಿರುದ್ಧ ಆಡಿರುವ ತಂಡವೇ ಹರಣಿಗಳ ನಾಡಿಗೆ ಹೋಗಲಿದೆ ಎಂದು ಹೇಳಲಾಗುತ್ತಿದೆ.
ಆದರೆ ಕಳಫೆ ಫಾರ್ಮ್‌ನಿಂದ ಕಂಗೆಟ್ಟಿರುವ ರಹಾನೆಗೆ ಮತ್ತೊಂದು ಅವಕಾಶ ಸಿಗುತ್ತೋ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.
ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದ್ದಾರೆ.
15 ಸದಸ್ಯರ ತಂಡದಲ್ಲಿ 11 ಮಂದಿಯನ್ನು ಅಂತಿಮ ತಂಡವಾಗಿ ಮತ್ತು ಉಳಿದ ನಾಲ್ವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಿದ್ದಾರೆ.
ಇನ್ನು ತಂಡದ ವಿಚಾರಕ್ಕೆ ಬಂದರೆ.. ಆರಂಭಿಕರಾಗಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಆಯ್ಕೆ ಮಾಡಿದ್ದಾರೆ. ಒನ್ ಡೌನ್ ನಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ಐದನೇ ಸ್ಥಾನದಲ್ಲಿ ರಹಾನೆ ಬದಲಿಗೆ ಶ್ರೇಯಸ್ ಅಯ್ಯರ್ ಗೆ ಇದ್ದಾರೆ.
ವಿಕೆಟ್ ಕೀಪರ್ ಆಗಿ ರಿಷಬ್ ಪಂತ್ ಇದ್ದರೇ ಆಲ್ ರೌಂಡರ್ ಗಳಾಗಿ ರವೀಂದ್ರ ಜಡೇಜಾ, ಅಶ್ವಿನ್ ಸ್ಥಾನ ಪಡೆದಿದ್ದಾರೆ.
ಬುಮ್ರಾ, ಶಮಿ ಮತ್ತು ಸಿರಾಜ್ ತಂಡದ ವೇಗಿಗಳಾಗಿದ್ದಾರೆ.
ಇನ್ನು ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಬುತ ಪ್ರದರ್ಶನ ನೀಡಿದ ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಅವರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ.
ಆಕಾಶ್ ಚೋಪ್ರಾ ಟೀಂ ಇಂಡಿಯಾ ಟೆಸ್ಟ್ ತಂಡ ಹೀಗಿದೆ.
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಮಯಾಂಕ್ ಅಗರ್ವಾಲ್, ಹನುಮಾನ್ ಯಾದವ್









