ಆಫ್ರಿಕಾ ಟೂರಿಗೆ ಟೀಂ ಇಂಡಿಯಾ ಪ್ರಕಟ : ರೋಹಿತ್ ಗೆ ಹೊಸ ಜವಾಬ್ದಾರಿ Team India saaksha tv
ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ಟೀಂ ಇಂಡಿಯಾದ ಟೆಸ್ಟ್ ತಂಡವನ್ನು ಪ್ರಕಟ ಮಾಡಿದೆ. ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಾಗಿದ್ದರೇ ಉಪನಾಯಕನ ಪಟ್ಟವನ್ನು ರೋಹಿತ್ ಶರ್ಮಾಗೆ ನೀಡಲಾಗಿದೆ. ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಅಜಿಂಕ್ಯ ರಹಾನೆಗೆ ತಂಡದಲ್ಲಿ ಅವಕಾಶ ಕೊಟ್ಟಿದ್ದರೂ ಉಪನಾಯಕನ ಪಟ್ಟದಿಂದ ಕೆಳಗಿಳಿಸಲಾಗಿದೆ.
ಇನ್ನು ತಂಡಕ್ಕೆ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ರಿಷಬ್ ಪಂತ್ ವಾಪಸ್ ಆಗಿದ್ದಾರೆ. ಆದ್ರೆ ಆರಂಭಿಕ ಆಟಗಾರ ಶುಭ್‌ಮನ್ ಗಿಲ್, ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಗಾಯದ ಕಾರಣ ಪ್ರವಾಸದಿಂದ ಹೊರಗುಳಿದಿದ್ದಾರೆ.
ಫಾರ್ಮ್ ಕೊರತೆಯಿಂದ ಕಂಗೆಟ್ಟಿರುವ ಪೂಜಾರ ಮತ್ತು ರಹಾನೆ ಮೇಲೆ ಆಯ್ಕೆದಾರರು ನಂಬಿಕೆ ಇಟ್ಟಿದ್ದಾರೆ. ಇವರಿಬ್ಬರನ್ನು 18 ಸದಸ್ಯರ ನಿಯಮಿತ ತಂಡದಲ್ಲಿ ಸೇರಿಸಲಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ-ಎ ತಂಡವನ್ನು ಪ್ರತಿನಿಧಿಸುತ್ತಿರುವ ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಹಾರ್ ಮತ್ತು ಅರ್ಜನ್ ನಾಗ್ವಾಸ್ವಾಲ್ಲಾ ಅವರನ್ನು ಸ್ಟ್ಯಾಂಡ್‌ಬೈ ಆಟಗಾರರನ್ನಾಗಿ ಘೋಷಿಸಲಾಗಿದೆ.
ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್-ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್-ಕೀಪರ್ ), ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್









