ಸೇನಾ ಹೆಲಿಕಾಪ್ಟರ್ ಅಪಘಾತದ ಕೊನೆ ಕ್ಷಣ ಮೊಬೈಲ್ ನಲ್ಲಿ ಸೆರೆ (VIDEO)
ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಅಪಘಾತದ ಕೊನೆ ಕ್ಷಣದ ವೀಡಿಯೋ ಪ್ರವಾಸಿಗರ ಮೊಬೈಲ್ ಅಲ್ಲಿ ರೆಕಾರ್ಡ್ ಆಗಿದೆ. ಇದು ಅಪಘಾತಕ್ಕೆ ಸ್ವಲ್ಪ ಮೊದಲು ಎಂದು ಹೇಳಲಾಗಿದೆ. ಇದನ್ನು ನೀಲಗಿರಿ ಅರಣ್ಯದಲ್ಲಿ ಪ್ರವಾಸಿಗರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಮುಸುಕಿರುವ ಮಂಜಿನ ನಡುವೆ ನಡುವೆ ಹೆಲಿಕಾಪ್ಟರ್ ತುಂಬಾ ಕೆಳ ಮಟ್ಟದಲ್ಲಿ ಹಾರುತ್ತಿರುವುದು ಕಂಡುಬಂದಿದೆ. ಕೆಲವು ಸೆಕೆಂಡುಗಳ ವೀಡಿಯೊ ಇದಾಗಿದೆ. ಕೆಲವು ಸೆಕೆಂಡುಗಳ ನಂತರ ಹೆಲಿಕಾಪ್ಟರ್ ಮರಗಳಿಗೆ ಅಪ್ಪಳಿಸಿತು ಎಂದು ಹೇಳಲಾಗುತ್ತಿದೆ.
ಇದೇ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಘಟನೆ ಕುರಿತು ಮಾಹಿತಿ ನೀಡಿದರು. ರಾವತ್ ಅವರ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ 12.08 ಕ್ಕೆ ಎಟಿಸಿ ಸಂಪರ್ಕವನ್ನು ಕಳೆದುಕೊಂಡಿತು ಎಂದು ಅವರು ಹೇಳಿದರು. ಸ್ಥಳೀಯರು ಸ್ಥಳಕ್ಕೆ ತಲುಪಿದಾಗ ಹೆಲಿಕಾಪ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಂಡಗಳೂ ಆಗಮಿಸಿದ್ದು, ಜನರನ್ನು ಸ್ಥಳಾಂತರಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
#WATCH | Final moments of Mi-17 chopper carrying CDS Bipin Rawat and 13 others before it crashed near Coonoor, Tamil Nadu yesterday
(Video Source: Locals present near accident spot) pic.twitter.com/jzdf0lGU5L
— ANI (@ANI) December 9, 2021








