ಆಹಾರ ಕ್ರಮ ಬದಲಿಸುವುದು ಬೇಡ – ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ಆಕ್ಷೇಪ
ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡುವ ಬಗ್ಗೆ ಬಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ, ಈ ಹಿಂದೆ ಲಿಂಗಾಯತ ಸಮುದಾಯದ ಕೆಲವು ಸಂಘಟನೆಗಳು ಮೊಟ್ಟೆ ವಿತರಣೆ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈಗ ಪೇಜಾವರ ಮಠದ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶಾಲೆ ಇರುವುದು ಶಿಕ್ಷಣಕ್ಕೋಸರ. ಅಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಕೆಲಸ ಮಾಡಬೇಕು. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನಿಸದಂತಾಗುತ್ತದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು.
ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರವಿದೆ. ಮಕ್ಕಳಲ್ಲಿ ತಿಳುವಳಿಕೆ ಇರುವುದಿಲ್ಲ. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಮಕ್ಕಳೊಳಗೆ ಮತಬೇಧ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚು ಸರ್ಕಾರ ನೀಡಲಿ. ಎಂದು ಶ್ರೀಗಳು ಹೇಳಿದರು.
ಅಪಘಾತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿಗೆ ರವಾನೆ….








