ನವದೆಹಲಿ : ದೇಶದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ ನಾಲ್ಕೈದು ದಿನಗಳಿಂದ 3 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಇಂದು ಇದೇ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ ಬರೊಬ್ಬರಿ 4,213 ಮಂದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಇನ್ನು, 97 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ ಅಂಕಿ ಅಂಶಗಳು
ಹೊಸ ಪ್ರಕರಣಗಳು-4,213
ಮೃತಪಟ್ಟವರು-97
ಒಟ್ಟಾರೆ ಸೋಂಕಿತರು-67,152
ಸಕ್ರಿಯ ಪ್ರಕರಣಗಳು-44,029
ಗುಣಮುಖರಾದವರು-20,917
ಒಟ್ಟಾರೆ ಮೃತರ ಸಂಖ್ಯೆ-2,206








